ಮನರಂಜನೆ

ನಾಳೆ ತೆರೆಯ ಮೇಲೆ 'ಸ್ಕೇರಿ ಫಾರೆಸ್ಟ್'

ನಾಳೆ ತೆರೆಯ ಮೇಲೆ 'ಸ್ಕೇರಿ ಫಾರೆಸ್ಟ್'

ಬೆಂಗಳೂರು,ಫೆ 25:ಕನ್ನಡದಲ್ಲಿ ಸಾಕಷ್ಟು ಹಾರಾರ್ ಕಥಾಹಂದರವಿರುವ ಚಿತ್ರಗಳು ಬಂದಿವೆ. ಆದರೆ ಎಲ್ಲ ಕಥೆಗಳಿಗಿಂತ ವಿಭಿನ್ನ ಕಥಾ ಹಂದರವುಳ್ಳ 'ಸ್ಕೇರಿ ಫಾರೆಸ್ಟ್' ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವಿದೆ. ಮೂಲತಃ ತುಮಕೂರಿನ ಮಾರಶೆಟ್ಟಿ ಹಳ್ಳಿಯವರಾದ ಜಯಪ್ರಭು ಆರ್ ಲಿಂಗಾಯಿತ್ ಈ ಚಿತ್ರದ ನಿರ್ಮಾಪಕರು. ಬಾಲಿವುಡ್ ನಲ್ಲಿ‌ ಅನುಭವ ಹೊಂದಿರುವ ಸಂಜಯ್ ಅಭೀರ್ ಈ ಚಿತ್ರದ ನಿರ್ದೇಶಕರು.‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ.ಕನ್ನಡದ ಯುವ ಪ್ರತಿಭೆ ಆದಿ ಹಾಗೂ ಎಲ್.ಕೆ.ಲಕ್ಷ್ಮೀಕಾಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

‌ಹಿನ್ನೆಲೆ ಸಂಗೀತ ಲಕ್ಷ್ಮೀಕಾಂತ್ ಅವರದು. ಹಾಲಿವುಡ್ ನ ಜಂಗಲ್ ಬುಕ್ 1994, ಹಿಂದಿಯ ರಾಗಿಣಿ ಎಂ.ಎಂ.ಎಸ್ ೨ ಸೇರಿದಂತೆ ಮುಂತಾದ ಹೆಸರಾಂತ ಚಿತ್ರಗಳ ಛಾಯಾಗ್ರಾಹಕರಾದ ನರೇನ್ ಗೇಡಿಯಾ ಅವರ ಛಾಯಾಗ್ರಹಣ, ರಾಜೇಶ್ ಶಾ ಸಂಕಲನ ಹಾಗೂ‌ ದೀಪಕ್ ಶರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಕುತೂಹಲಕಾರಿ ಕಥೆಯೊಂದಿಗೆ ಟ್ರಯಾಂಗಲ್ ಲವ್ ಸ್ಟೋರಿ ಸಹ ಈ ಚಿತ್ರದಲ್ಲಿದೆ. ನಿರ್ಮಾಪಕ‌ ಜಯಪ್ರಭು ಸಹ‌ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ಜೀತ್ ರಾಯ್ದತ್ ಈ ಚಿತ್ರದ ದ್ವಿತೀಯ ನಾಯಕ. ಬಹುಭಾಷ ನಟ ಯಶ್ ಪಾಲ್ ಶರ್ಮ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.  ಕೊಡಗಿನ‌ ಟೀನಾ ಪೊನ್ನಪ್ಪ, ಆಮ್‌ ರೀನ್, ಕಲ್ಪನ‌ ಈ ಚಿತ್ರದ ನಾಯಕಿಯರು. ಅಷ್ಟೇ ಅಲ್ಲದೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ನಿರ್ಮಾಪಕರ ಪುತ್ರಿ ಬೇಬಿ ಪೂಜಾ ಸಹ ಈ‌ ಚಿತ್ರದ ಪ್ರಮುಖಪಾತ್ರದಲ್ಲಿ‌ ಅಭಿನಯಿಸಿದ್ದಾರೆ.

  


ಸುದ್ದಿ ಓದಿ