ಗದಗದಲ್ಲಿ ಜುಲೈ 13ರಂದು ಎಸ್ಡಿಪಿಐ ಜಿಲ್ಲಾ ನಾಯಕರ ಸಭೆ
SDPI district leaders' meeting in Gadag on July 13
ಗದಗ, ಜು.11: ನಗರದ ಕನಕ ಭವನದಲ್ಲಿ ಜುಲೈ 13ರಂದು ಎಸ್ಡಿಪಿಐ ಜಿಲ್ಲಾ ಮಟ್ಟದ ನಾಯಕರ ಸಭೆ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಭಾಗವಹಿಸಲಿದ್ದಾರೆ ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕುಡ್ಲಿಪೇಟೆ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಫಿ, ರಾಷ್ಟ್ರೀಯ ಕಾರ್ಯದರ್ಶಿ ಮೊಯಿದೀನ್ ಹಾಗೂ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅವರು, ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಮತದಾರರಿಂದ ಪೌರತ್ವ ದಾಖಲೆಗಳನ್ನು ಕೇಳುವುದು ಅಸಂವಿಧಾನಿಕ ಕ್ರಮವಾಗಿದ್ದು, ಚುನಾವಣಾ ಆಯೋಗವನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ದೇಶದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ, ಅವುಗಳ ಪರಿಹಾರಕ್ಕೆ ಬದಲಾಗಿ ಸಾಮಾನ್ಯ ನಾಗರಿಕರ ಪೌರತ್ವವನ್ನೇ ಪ್ರಶ್ನಿಸುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದರು.
ಕಳೆದ 14 ವರ್ಷಗಳಲ್ಲಿ ಸುಮಾರು 10 ಲಕ್ಷ ಜನರು ದೇಶದ ಪೌರತ್ವ ಕಳೆದುಕೊಂಡಿರುವುದಾಗಿ ಹೇಳಿದ ಅವರು, ಚುನಾವಣಾ ಆಯೋಗಕ್ಕೆ ಪೌರತ್ವದ ದಾಖಲೆ ಕೇಳುವ ಅಧಿಕಾರವಿಲ್ಲ ಎಂದು ವಾದಿಸಿದರು. ಕರ್ನಾಟಕದಲ್ಲಿ ನಾಲ್ವರು ಬಿಎಲ್ಒಗಳು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗಂಭೀರ ಆರೋಪ ಮಾಡಿದರು.
ಎಸ್ಡಿಪಿಐಗೆ ಈಗ 17 ವರ್ಷ ಪೂರ್ಣಗೊಂಡಿದ್ದು, ರಾಜ್ಯದ ಏಳು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ 300ಕ್ಕೂ ಹೆಚ್ಚು ಜನಪ್ರತಿನಿಧಿಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ ಎಂದು ಹೇಳಿದರು. ಮುಂಬರುವ ಚುನಾವಣೆಯನ್ನು ಎದುರಿಸುವ ತಂತ್ರ ರೂಪಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಸ್ತಾಕ್ ಹೊಸಮನಿ, ಇದಾಯತ್ ಉಲ್ಲಾ ಕಾಗದಗಾರ, ಬಿಲಾಲ್ ಗೋಖಾವಿ, ಅಫಾನ್ ತರಫ್ದಾರ್, ಅಬ್ದುಲ್ ಅಜೀಜ್, ಮಲ್ಲಿಕ್ ನಾಲಬಂದ್, ಮೊಹಮ್ಮದ್ ಶರೀಫ್ ಬಳ್ಳಾರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 