ನೀಟ್ ಪರೀಕ್ಷೆ ಹಗರಣ, ಉಪವಾಸ ಸತ್ಯಾಗ್ರಹ ನಿರಂತ ಸೋನಮ್ ವಾಂಗ್ಚುಕ್ ಅಪಹರಣ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ನೀಟ್ ಪರೀಕ್ಷೆ ಹಗರಣ, ಉಪವಾಸ ಸತ್ಯಾಗ್ರಹ ನಿರಂತ ಸೋನಮ್ ವಾಂಗ್ಚುಕ್ ಅಪಹರಣ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ SFI protests against the NEET exam scandal and the abduction of Sonam Wangchuk, who is on a hunger s

 ಬ್ಯಾಡಗಿ  21: ನೀಟ್ ಪರೀಕ್ಷೆ ಹಗರಣ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿ ಹೋರಾಟವನ್ನು ಹತ್ತಿಕ್ಕುವ ಬದಲು,  

ಪ್ರತಿಭಟನಾಕಾರರೊಂದಿಗೆ ತಕ್ಷಣ ಮಾತುಕತೆ ನಡೆಸಿ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಬ್ಯಾಡಗಿ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಭಾನುವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  

ನೀಟ್ ಪರೀಕ್ಷೆ ಹಗರಣ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿರುವುದನ್ನು ಭಾರತ ವಿದ್ಯಾರ್ಥಿ  

ಫೆಡರೇಶನ್ (ಎಸ್‌ಎಫ್‌ಐ) ಬ್ಯಾಡಗಿ ತಾಲ್ಲೂಕು ಸಮಿತಿ ತೀವ್ರವಾಗಿ ಖಂಡಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಾಂತಿಯುತವಾಗಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಯನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ವೈಫಲ್ಯಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಬದಲು, ಪ್ರತಿಭಟನಾಕಾರರೊಂದಿಗೆ ತಕ್ಷಣ ಮಾತುಕತೆ ನಡೆಸಿ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು.