ಜರ್ಮನಿಯ ಹನೌನಲ್ಲಿ ಗುಂಡಿನ ದಾಳಿ : ಎಂಟುಸಾವು
ಫ್ರಾಂಕ್ ಫರ್ಟ್, ಫೆ 20, ಪಶ್ಚಿಮ ಜರ್ಮನ್ ನಗರಿ ಹನೌನಲ್ಲಿ ಬುಧವಾರ ರಾತ್ರು ನಡೆದ ಎರಡು ಗುಂಡಿನ ದಾಳಿಗಳಲ್ಲಿ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹನೌನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎರಡು ಗುಂಡಿನ ದಾಳಿ ನಡೆದಿತ್ತು. ಗಾಢ ಬಣ್ಣದ ವಾಹನ ದಾಳಿಯ ಸ್ಥಳದಲ್ಲಿ ಹೊಕ್ಕಿತ್ತು ಎಂದು ಇದಕ್ಕೂ ಮುನ್ನ ಪೊಲೀಸರು ತಿಳಿಸಿದ್ದರು. ಘಟನೆಗೆ ಕಾರಣರಾದವರ ಪತ್ತೆ ಕಾರ್ಯಾಚರಣೆ ಪ್ರಗತಿಯಲ್ಲಿದೆ. ನಗರದಲ್ಲಿ ಎರಡು ಶಿಶಾ ಬಾರ್ ಗಳ ಬಳಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಹನೌ, ಫ್ರಾಂಕ್ ಫರ್ಟ್ ನಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿದ್ದು ಸುಮಾರು ಒಂದು ಲಕ್ಷ ಜನಸಂಖ್ಯೆ ಹೊಂದಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 