ವಿಜಯಪುರ

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ


ವಿಜಯಪುರ ಸೆ.21: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ ಹಕ್ಕುಗಳು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರೀಶೀಲಿಸುವ ಉದ್ದೇಶದಿಂದ ‘ಖಋ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ ಹಮ್ಮಿಕೊಳ್ಳಲಾಗಿದೆ.  

ಇದರ ಭಾಗವಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಸೆ.22ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಸೆ.22ರಿಂದ 30ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಗರಿಕ ಸಂಘಟನೆಗಳೊಂದಿಗೆ ಪರಿಶೋಧನಾ ಕಾರ್ಯ ನಡೆಸಲಿದ್ದು, ವಿಜಯಪುರದಲ್ಲಿಯೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  

ಸೆ.22ರಂದು ಸಂಜೆ 5ರಿಂದ 7ರವರೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಮಧುವನ್ ಹೋಟೆಲ್ನ ಕಾನ್ಫರೆನ್ಸ್‌ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಗರಿಕ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಖಋ ಪ್ರಕ್ರಿಯೆಗೆ ಸಂಬಂಧಿಸಿದ ಸಾರ್ವಜನಿಕರ ಅನುಭವಗಳು, ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳು ಹಾಗೂ ದಾಖಲೆಗಳ ಪರೀಶೀಲನೆ ಕುರಿತು ಚರ್ಚೆ ನಡೆಯಲಿದೆ.  

ರಾಜ್ಯದ ಆಯ್ದ 100 ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯ ಪರೀಶೀಲನೆ ನಡೆಸಿ, ಸಮಸ್ಯೆ ಎದುರಿಸುತ್ತಿರುವ ಮತದಾರರಿಂದ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸುವ ಉದ್ದೇಶವನ್ನು ಅಭಿಯಾನ ಹೊಂದಿದೆ. ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ನಾಗರಿಕ ವರದಿ ಸಿದ್ಧಪಡಿಸಲಾಗುವುದು ಎಂದು ‘ಮತ ಕಾವಲು ಸಮಿತಿ ವಿಜಯಪುರ’ ತಿಳಿಸಿದೆ.  

ಕಾರ್ಯಕ್ರಮದಲ್ಲಿ ನಾಗರಿಕರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. 


ಸುದ್ದಿ ಓದಿ