10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ

10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ

10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್) ಎರಡನೇ ಹಂತದಲ್ಲಿ 10 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೋಮವಾರ ಹೇಳಿದ್ದಾರೆ.  ಈ ಪ್ರಕ್ರಿಯೆ ನವೆಂಬರ್ನಲ್ಲಿ ಆರಂಭವಾಗಿ 2026ರ ಫೆಬ್ರುವರಿಯಲ್ಲಿ ಅಂತ್ಯವಾಗಲಿದೆ.  

ಎರಡನೇ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪ, ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಕ್ರಿಯೆ ನಡೆಯಲಿದೆ.  

ಇವುಗಳಲ್ಲಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲೂ 2026ರಲ್ಲಿ ಚುನಾವಣೆ ನಡೆಯಲಿದೆ. ಆದರೆ ಪೌರತ್ವ ಕಾಯ್ದೆಯಡಿಯಲ್ಲಿ, ಅಸ್ಸಾಂನಲ್ಲಿ ಪೌರತ್ವಕ್ಕಾಗಿ ಪ್ರತ್ಯೇಕ ನಿಬಂಧನೆಗಳಿವೆ. ಹೀಗಾಗಿ ಅಸ್ಸಾಂನಲ್ಲಿ ಪ್ರತ್ಯೇಕವಾಗಿ ಎಸ್‌ಐಆರ್ ನಡೆಸಲಾಗುವುದು. ಇದಕ್ಕೆ ದಿನಾಂಕವನ್ನೂ ಘೋಷಿಸಲಾಗುವುದು ಎಂದರು.  

ನ.4ರಂದು ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದ್ದು, ಡಿ.4ರವರೆಗೆ ಇರಲಿದೆ. ಮತದಾರರ ಕರಡು ಪಟ್ಟಿಯನ್ನು ಡಿ.9ರಂದು ಬಿಡುಗಡೆ ಮಾಡಲಾಗುವುದು. 2026ರ ಫೆ.7ರಂದು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. 


ಸುದ್ದಿ ಓದಿ