ರಾಜ್ಯಮಟ್ಟಕ್ಕೆ ಆಯ್ಕೆ ಎಸ್ ಎಸ್ ಹಿರೇಮಠ
ಹುಕ್ಕೇರಿ 16: ತಾಲೂಕಿನ ನೇರ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿಷೇಕ ಪರೀಟ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ರೋಹನ್ ಬಡಿಗೇರ ಪ್ರಬಂಧದಲ್ಲಿ ದ್ವಿತೀಯ.
ಈ ಇಬ್ಬರು ವಿದ್ಯಾರ್ಥಿಗಳು ಇಂದು ಚಿಕ್ಕೋಡಿಯಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಯರಾದ ಎಸ್ ಎಸ್ ಹಿರೇಮಠ, ಸಮಸ್ತ ಗುರು ವೃಂದ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿಲೇಶ್ ಜಾದವ್ ಹಾಗೂ ಸರ್ವ ಸದಸ್ಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಿದಾನಂದ ಬ ದೇಸಾಯಿ ಹಾಗೂ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.