ಎಸ್ಸೆಸ್ಸೆಲ್ಸಿ: ಕನ್ನಡ ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರ
ಲೋಕದರ್ಶನ ವರದಿ
ಹೂವಿನ ಹಡಗಲಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಸಾಕ್ಷರತಾ ಶಿಕ್ಷಣ ಇಲಾಖೆತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ತುಂಗಭದ್ರಾ ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗಣಿತ ವಿಜ್ಞಾನ ಇಂಗ್ಲಿಷ್ ಸ್ವಲ್ಪ ಕಠಿಣ. ಆಧುನಿಕ ತಂತ್ರಜ್ಞಾನ ಬಳಸಿ ಮಕ್ಕಳಿಗೆ ಅರ್ಥವಾಗುವಂತೆ ಸರಳವಾಗಿ ಬೋಧಿಸಿರಿ ಎಂದು ಹೇಳಿದರು.ಕನ್ನಡ ಗದ್ಯ ಪದ್ಯ ಮತ್ತು ವ್ಯಾಕರಣ ಪ್ರಬಂಧ ಪತ್ರ ಲೇಖನ ಮೊದಲಾದ ಅಂಶಗಳನ್ನು ರಸವತ್ತಾಗಿ ವರ್ಣಿಸಿ ಭಾಷೆ ಪ್ರೌಢಿಮೆ ಬೆಳೆಸಿರಿ ಎಂದರು.ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಮನೋಹರ್ ಹಳೆಗನ್ನಡ ಸಾಹಿತ್ಯ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಪಿ ಪ್ರಕಾಶ್ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ರಾಜ್ಯ ಸಹ ಕಾರ್ಯದರ್ಶಿ ಶಿವಕುಮಾರ್ ಗಡ್ಡಿ ಖಜಾಂಚಿ ಬಸಪ್ಪ ಕೆ,ಶೇಕ್ ಅಹ್ಮದ್, ಕೋರಿ ವಿಶ್ವನಾಥ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಇತರರು ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿಕನ್ನಡ ಭಾಷೆಯ ರವೀಶ್ ಮೈಸೂರು, ಗಣಿತ ವಿಷಯದಬಿ ಎನ್ ಲಕ್ಷ್ಮಣ್ ಶಿಕ್ಷಕರಿಗೆ ತರಬೇತಿ ನೀಡಿದರು.ಸುರೇಶ ಅಂಗಡಿ, ದ್ವಾರಕೀಶ್ ರೆಡ್ಡಿ ನಿರ್ವಹಿಸಿದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ವಸತಿ ಶಾಲೆಯ ಕನ್ನಡ ಗಣಿತ ವಿಷಯ ಶಿಕ್ಷಕರು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.