ಹೂವಿನ ಹಡಗಲಿ

ಎಸ್ಸೆಸ್ಸೆಲ್ಸಿ: ಸಮಾಜ ಶಿಕ್ಷಕರ ಕಾರ್ಯಾಗಾರ ಶೈಕ್ಷಣಿಕ ಪ್ರಗತಿಗೆ ಯೋಜನೆ

ಎಸ್ಸೆಸ್ಸೆಲ್ಸಿ: ಸಮಾಜ ಶಿಕ್ಷಕರ ಕಾರ್ಯಾಗಾರ ಶೈಕ್ಷಣಿಕ ಪ್ರಗತಿಗೆ ಯೋಜನೆ

ಹೂವಿನ ಹಡಗಲಿ 03: ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪ್ರಗತಿಗೆ ಪೂರಕವಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಿರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.ತಾಲೂಕಿನ ಇಟ್ಟಿಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ, ಸಮಾಜ ವಿಜ್ಞಾನ ವಿಷಯ ಶಿಕ್ಷಕರ ವೇದಿಕೆ ವತಿಯಿಂದ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಸಮಾಜ ವಿಷಯ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಸಮಾದ ವಿಷಯದಲ್ಲಿ ಬರುವ ಸುಲಭ ಘಟಕಗಳಿಗೆ ಹೆಚ್ಚು ಒತ್ತು ನೀಡಬೇಕು. ಪಾಸಾಗಲು ಕನಿಷ್ಠ ಅಂಕ ಗಳಿಸುವ ಹಾಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.ಇಸವಿ ಸುಲಭವಾಗಿ ನೆನಪಿಡುವ ಕ್ರಮ, ನಕಾಶೆ ರಚಿಸಿ ಸ್ಥಳಗಳನ್ನು ಗುರುತಿಸುವುದು ಒಂದು ಎರಡು ಅಂಕಗಳ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ್ಯ ಬೆಳೆಸಿರಿ ಎಂದರು.ಸಮಾಜ ವಿಜ್ಞಾನ ವಿಷಯ ಶಿಕ್ಷಕರು ಪಾಸಿಂಗ್ ಪ್ಯಾಕೇಜ್ ತಯಾರಿಸುವಂತೆ ತಿಳಿಸಿದ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಿಯಾತ್ಮಕವಾಗಿ ಕಾರ್ಯ ನಿರ್ವಹಿಸಿರಿ ಎಂದು ಹೇಳಿದರು. 

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ವಿದ್ಯಾರ್ಥಿಗಳು ಗೈರುಹಾಜರಾಗದಂತೆ ಕ್ರಮ ವಹಿಸಬೇಕು ಎಂದರು.ಸಂಪನ್ಮೂಲ ವ್ಯಕ್ತಿಯಾಗಿ ಮುಧೋಳದ ಲಕ್ಷ್ಮಿಕಾಂತ ಮಮದಾಪೂರ ಉಪಯುಕ್ತ ಮಾರ್ಗದರ್ಶನ ನೀಡಿದರು.ಶಾಲೆಯ ಮುಖ್ಯ ಶಿಕ್ಷಕ ಬಾಗಾರ ನಿಂಗಪ್ಪ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಸಹ ಶಿಕ್ಷಕರ ಸಂಘದ ನಿರ್ದೇಶಕ ಹೆಚ್ ಕಾಂತೇಶ್, ಬನ್ನೆಪ್ಪ ಕೊಳಚಿ ಇತರರು ಉಪಸ್ಥಿತರಿದ್ದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಗಳ ಸಮಾಜ ವಿಜ್ಞಾನ ವಿಷಯ ಶಿಕ್ಷಕರು ಭಾಗವಹಿಸಿದ್ದರು. 


ಸುದ್ದಿ ಓದಿ