ರಾಣೆಬೆನ್ನೂರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಸ್ಕ್‌ ವಿತರಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾಸ್ಕ್‌ ವಿತರಣೆ

ರಾಣೇಬೆನ್ನೂರ 19:  ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಜುಲೈ 19ರಿಂದ 22ರವರೆಗೆ ನಡೆಯಲಿದ್ದು ಈ ಹಿನ್ನಲೆಯಲ್ಲಿ ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದ ಅರ್ಚಕರಾದ ಸಂತೋಷ ಭಟ್ ಪೂಜಾರ ಅವರು ತಮ್ಮ ಸಾಮಾಜಿಕ ಸೇವಾ ಹಿನ್ನಲೆಯಲ್ಲಿ ಜಿಲ್ಲೆಯ ಸಮಗ್ರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಮಾಸ್ಕ್‌ ಮತ್ತು ತಾಲೂಕಿನ ವಿದ್ಯಾರ್ಥಿಗಳಿಗೆ ನೀರಿನ ಬಾಟಲ್‌ಗಳನ್ನು ವಿತರಿಸುವ ಕಾರ್ಯಕ್ರಮವು ಸ್ಥಳೀಯ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಅರುಣಕುಮಾರ ಪೂಜಾರ ಅವರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮತ್ತು ತಾಲೂಕಿನ ಶಿಕ್ಷಣಾಧಿಕಾರಿ ಗುರುಪ್ರಸಾದ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಾನಿಕ ಆಡಳಿಂತ ಮಂಡಳಿಯ ಉಪಾಧ್ಯಕ್ಷ ವಿ ಪಿ ಲಿಂಗನಗೌಢ್ರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ,  ನಗರಸಭಾ ಸದಸ್ಯ ಪ್ರಕಾಶ ಪೂಜಾರ, ಸಂಸ್ಥೆಯ ಸದಸ್ಯರಾದ ಬಸವರಾಜ ಪಟ್ಟಣಶೆಟ್ಟಿ, ವೀರಣ್ಣ ಅಂಗಡಿ, ಕಾಲೇಜಿನ ಪ್ರಾಚಾರ್ಯ ನಾರಾಯಣ ಹೆಗಡೆ, ಎಫ್‌.ಎನ್‌.ಗುಡಿಕಟ್ಟಿ, ಅನಿಲ್ ದಂಡಿಗಿ, ಎಂ.ಡಿ.ದ್ಯಾಮಣ್ಣನವರ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಪ್ರಾಧ್ಯಾಪಕರು, ಶಿಕ್ಷಕರು ಪಾಲ್ಗೊಂಡಿದ್ದರು. ಸಂತೋಷಭಟ್ ಪೂಜಾರ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾಸ್ಕ್‌ ಮತ್ತು ನೀರಿನ ಬಾಟಲ್‌ಗಳನ್ನು ವಿತರಿಸಿ ಪರೀಕ್ಷೆಯಲ್ಲಿ ಯಶಸ್ವಿಯಾಗುವಂತೆ ಶುಭ ಹಾರೈಸಿದರು. 


ಸುದ್ದಿ ಓದಿ