ಎಸ್ಸೆಸ್ಸೆಲ್ಸಿ ಪರೀಕ್ಷೆ: ಲವಲವಿಕೆಯಿಂದ ವಿದ್ಯಾರ್ಥಿಗಳು ಹಾಜರು
ಸಿರುಗುಪ್ಪ 29: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಉತ್ಸಾಹದಿಂದ ಹಾಜರಾಗಿ ಲವಲವಿಕೆಯಿಂದ ಬರೆದರು ಎಂದು ತಹಶೀಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ ತಿಳಿಸಿದರು. ಸೋಮವಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು ಸಿರುಗುಪ್ಪ ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಿದ್ದು 2,272 ಗಂಡು, 2,152 ಹೆಣ್ಣು, ಒಟ್ಟು 4,427 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದಾರೆ . ಆರೋಗ್ಯ ಇಲಾಖೆ ತಪಾಸಣೆಗೆ ಸಿಬ್ಬಂದಿ ನೇಮಿಸಿತ್ತು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು. 4,427ವಿದ್ಯಾರ್ಥಿಗಳ ಪೈಕಿ 4,132 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು 295 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಸಂಪನ್ಮೂಲ ಸಮನ್ವಯ ಅಧಿಕಾರಿ ಚಾಗಪ್ಪ ತಿಳಿಸಿದರು.