ಎಸ್‌ಎಸ್‌ಎಲ್‌ಸಿ ಫಲಿತಾಂಶ: ಕರ್ನಾಟಕ ಪಬ್ಲಿಕ್ ಶಾಲೆ ಕೂಡಗಿ ವಿಧ್ಯಾರ್ಥಿಗಳ ಸಾಧನೆ
SSLC Results: Karnataka Public School Koodagi students' performance
ಕೊಲ್ಹಾರ 24 : ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಗಳೆಂದರೆ ಮೂಗು ಮುರಿಯುುವವರೇ ಜಾಸ್ತಿ. ಆದರೆ ನಿಜವಾದ ಗುಣಾತ್ಮಕ ಬದಲಾವಣೆಗಳು ಇರುವುದು ಸರಕಾರಿ ಶಾಲೆಗಳಲ್ಲಿ ಎಂಬುದನ್ನ ಕರ್ನಾಟಕ ಪಬ್ಲಿಕ್ ಶಾಲೆ, ಕೂಡಗಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ತೋರಿಸಿಕೊಟ್ಟಿದ್ದಾರೆ 2025- 26 ನೇ ಸಾಲಿನ ಎಸ್ ಎಸ್‌ಎಲ್‌ಸಿ ಫಲಿತಾಂಶ ಶೇಕಡ 95.14ಅ ರಷ್ಟಾಗಿದ್ದು ಶಾಲೆಯ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮದ ಗುರು ಹಿರಿಯರು ಶುಭ ಹಾರೈಸಿದ್ದಾರೆ ಹಾಗೂ ಶಾಲೆಗಳ ಬಗ್ಗೆ ಮೆಚ್ಚುಗೆ ಮಾತುಗಳನಾಡಿ ಶಹಭಾಷಗಿರಿ ನೀಡಿದ್ದಾರೆ. ಇಡೀ ಶಾಲೆಗೆ ರಾಹುಲ್ ಪಾಟೀಲ 593, ಕೀರುಬಾಯಿ ಪವಾರ್ 566 ರಾಧಿಕಾ ಜಲಧಿ 565 ಅಂಕಗಳನ್ನು ಪಡೆಯುವುದರ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಕನ್ನಡ ಭಾಷೆಯಲ್ಲಿ 103ಕ್ಕೆ 103 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಹಿಂದಿ ವಿಷಯದಲ್ಲಿ 103ಕ್ಕೆ 103 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಗಣಿತ ವಿಷಯದಲ್ಲಿ 103ಕ್ಕೆ 103 ವಿದ್ಯಾರ್ಥಿಗಳು ಪಾಸಾಗಿದ್ದಾರೆ103 ವಿದ್ಯಾರ್ಥಿ ಗಳಲ್ಲಿ 98 ವಿದ್ಯಾರ್ಥಿಗಳು ಪಾಸಾಗೋದರ ಮೂಲಕ ಖುಷಿಪಟ್ಟಿದ್ದಾರೆ 06 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದರೆ 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 27 ವಿದ್ಯಾರ್ಥಿಗಳ ದ್ವಿತೀಯ ದರ್ಜೆಯಲ್ಲಿ ಪಾಸ್ ಆಗುವುದರ ಮೂಲಕ ಶಾಲೆಯ ಗ್ರಾಮದ ಕೀರ್ತಿಯನ್ನು ಜಿಲ್ಲಾಮಟ್ಟದಲ್ಲಿ ಅಷ್ಟೇ ಅಲ್ಲದೆ ರಾಜ್ಯಮಟ್ಟದಲ್ಲೂ ಕೂಡ ಬೆಳಗಿದ್ದಾರೆ.
ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶಾಲೆಯ ಉಪ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಗ್ರಾಮದ ಗುರು ಹಿರಿಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶಾಲೆಯ ಫಲಿತಾಂಶವನ್ನು ಕಂಡು ನಮ್ಮ ಕರವೇ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾದ ಮಹೇಶಕುಮಾರ ಹರಿಜನ ಮತ್ತು ಕಾಲೇಜ್ ಅಭಿವೃತ್ತಿ ಸಮಿತಿ ಅಧ್ಯಕ್ಷ ಹನುಮಂತ ಮಸೂತಿ ಮಾತನಾಡಿ ಕಾಲೇಜಿನ ಸಿಬ್ಬಂದಿ ವರ್ಗದವರ ಬಗ್ಗೆ ಹಾಗೂ ಪ್ರಾಚಾರ್ಯರ ಬಗ್ಗೆ ನಮಗೆ ತುಂಬಾ ಅಭಿಮಾನವಿದೆ ಹಾಗೂ ಶಾಲೆಯ ಫಲಿತಾಂಶದಲ್ಲಿ ನಿಮ್ಮೆಲ್ಲರ ಪಾತ್ರ ಮೆಚ್ಚುವಂಥದ್ದು ಎಂದು ಹರುಷ ವ್ಯಕ್ತಪಡಿಸಿ ಅಭಿನಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 