ಎಸ್ಎಸ್ಎಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಮಾಮನಿ ಫೌಂಡೇಶನ್ನಿಂದ ಸನ್ಮಾನ
SSLC toppers honored by Mamani Foundation
ಸವದತ್ತಿ 26: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ತಾಲೂಕಿಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮಾಮನಿ ಫೌಂಡೇಶನ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ವಿರೂಪಾಕ್ಷ ಮಾಮನಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದ ವಿಶೇಷತೆಯೆಂದರೆ, ಫೌಂಡೇಶನ್ನ ಪದಾಧಿಕಾರಿಗಳು ಸಾಧಕ ವಿದ್ಯಾರ್ಥಿಗಳ ಮನೆಮನೆಗೆ ಭೇಟಿ ನೀಡಿ ಅವರನ್ನು ಅಭಿನಂದಿಸಿದರು.
ಯುವ ಮುಖಂಡ ಶ್ರೇಯಸ್ ಮಾಮನಿ ಅವರು ವಿದ್ಯಾರ್ಥಿಗಳ ನಿವಾಸಕ್ಕೆ ತೆರಳಿ, ಹೂಗುಚ್ಛ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿ, ಅವರ ಮುಂದಿನ ಉನ್ನತ ಶಿಕ್ಷಣಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಶ್ರೇಯಸ್ ಮಾಮನಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಅಪಾರ ಹೆಮ್ಮೆಯ ವಿಷಯವಾಗಿದೆ.
ಅದರಲ್ಲೂ ಹೆಣ್ಣುಮಕ್ಕಳು ಶಕ್ತಿ ರೂಪದಲ್ಲಿ ಹೊರಹೊಮ್ಮುತ್ತಿರುವುದು ಸಂತಸದ ಸಂಗತಿ. ಇವರ ಪರಿಶ್ರಮವು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದು ಹಾರೈಸಿದರು.ತಾಲೂಕು ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗುರುತಿಸಿ ಗೌರವಿಸಲಾಯಿತು. ಅಮೋಘ ನವಲಗುಂದ: ಶೇ. 98.88 ಅಂಕಗಳೊಂದಿಗೆ ತಾಲೂಕಿಗೆ ದ್ವಿತೀಯ ಸ್ಥಾನ, ರೇಣುಕಾ ನರಿ: ಶೇ. 98.80 ಅಂಕಗಳೊಂದಿಗೆ ತೃತೀಯ ಸ್ಥಾನ, ಪ್ರಗತಿ ನಡುವಿನಹಳ್ಳಿ ಶೇ. 98.56 ಅಂಕಗಳನ್ನು ಗಳಿಸಿ ಸಾಧನೆ, ಶ್ರದ್ಧಾ ಕಿತ್ತೂರಮಠ ಶೇ. 98.24 ಅಂಕಗಳನ್ನು ಪಡೆದು ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ವಿದ್ಯಾರ್ಥಿಗಳ ಪಾಲಕರು, ಹಾಗೂ ಮಾಮನಿ ಫೌಂಡೇಶನ್ನ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 