ಪತಿಯ ಕುಟುಂಬಸ್ಥರ ಕಿರುಕುಳ: ಗೃಹಿಣಿ ಆತ್ಮಹತ್ಯೆ
ಬೆಂಗಳೂರು,ಮಾ 5 ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.26 ವರ್ಷದ ನಂದಿನಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಸುಮಾರು 6 ವರ್ಷಗಳ ಹಿಂದೆ ನಂದಿನಿ, ರಾಜು ಎಂಬುವವರೊಂದಿಗೆ ಪ್ರೀತಿಸಿ ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.ಪತಿ ರಾಜು ಹಾಗೂ ಆತನ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಂದಿನಿ ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 