ಸದ್ಭಾವನಾ ದಿನಾಚರಣೆ
ಲೋಕದರ್ಶನ ವರದಿ
ಹಂಪಿ 20: ಕನ್ನಡ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಸ.ಚಿ. ರಮೇಶ ಅವರು ವಿಶ್ವವಿದ್ಯಾಲಯದ ಸಿಬ್ಬಂದಿಗಳಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಕುಲಸಚಿವ ಡಾ. ಎ. ಸುಬ್ಬಣ್ಣ ರೈ, ವಿಜ್ಞಾನಗಳ ನಿಕಾಯದ ಡೀನರಾದ ಡಾ. ಮಾಧವ ಪೆರಾಜೆ, ಎನ್.ಎಸ್.ಎಸ್ ಘಟಕದ ಸಂಯೋಜನಾಧಿಕಾರಿ ಡಾ. ಅಮರೇಶ ಯತಗಲ್, ಉಪಕುಲಸಚಿವರಾದ ಡಾ. ಎ. ವೆಂಕಟೇಶ, ಸಹಾಯಕ ಕುಲಸಚಿವ ಗುರುಬಸಪ್ಪ ಹಾಗೂ ಆಡಳಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.