ಪಿಡಿಐಟಿಯಲ್ಲಿ ಸದ್ಭಾವನಾ ದಿನಾಚರಣೆ
ಲೋಕದರ್ಶನ ವರದಿ
ಹೊಸಪೇಟೆ23: ``ಜಾತ್ಯಾತೀತತೆಯ ಅಂಶ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಮೊದಲಿನಿಂದಲೂ ಅಂತರ್ಗತವಾಗಿ ಬಂದಿದೆ, ಜಾತ್ಯಾತೀತತೆ ಭಾರತೀಯ ಹೆಗ್ಗುರುತು'' ಎಂದು ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ ಎಸ್.ಎಂ.ಶಶಿಧರ್ ತಿಳಿಸಿದರು.
ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಆಯೋಜಿಸಲಾಗಿದ್ದ ಸದ್ಭಾವನಾ ದಿನಾಚರಣೆ ಸಂದರ್ಭದ ಅಧ್ಯಕ್ಷತೆ ವಹಿಸಿ ವಿದ್ಯಾಥರ್ಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡುತ್ತಿದ್ದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 72ನೇ ಜನ್ಮ ಜಯಂತಿಯನ್ನು ಸದ್ಭಾವನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಜಾತಿ, ಧರ್ಮ, ಪ್ರದೇಶ, ಮತ, ಭಾಷೆಯ ಮೊದಲಾದ ಯಾವುದೇ ಭೇದ ಭಾವವಿಲ್ಲದೆ ಭಾರತದ ಎಲ್ಲಾ ಜನತೆಯು ಭಾವೈಕ್ಯ ಮತ್ತು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ವೈಯಕ್ತಿಕವಾಗಿಯಾಗಲಿ, ಸಾಮೂಹಿಕವಾಗಿಯಾಗಲಿ ಸಮಾಜದಲ್ಲಿರುವ ಬೇಧಭಾವಗಳು, ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಮುಂದಾಗಬೇಕು ಎಂದು ಅವರು ಪ್ರತಿಜ್ಞೆ ಬೋಧಿಸಿದರು.
ಎನ್.ಎಸ್.ಎಸ್. ಘಟಕದ ಸಂಚಾಲಕರಾದ ಆರ್. ನವೀನ, ಹಿರಿಯ ಅಧ್ಯಾಪಕರಾದ ಪ್ರತಾಪ್ ಕುಲಕಣರ್ಿ, ಡಾ. ಶಿವಕೇಶವ ಕುಮಾರ್, ಚಕ್ರಸಾಲಿ ಮುಂತಾದವರು ಉಪಸ್ಥಿತರಿದ್ದರು. 100ಕ್ಕೂ ಹೆಚ್ಚು ವಿದ್ಯಾಥರ್ಿಗಳು ಈ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 