ಸದ್ಭಾವನಾ ದಿನಾಚರಣೆ

ಸದ್ಭಾವನಾ ದಿನಾಚರಣೆ  Sadbhavana Diwas Celebration

ಲೋಕದರ್ಶನ ವರದಿ 

ಗದಗ, ಆ.20: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸದ್ಭಾವನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಅವರು ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದಭಾವವಿಲ್ಲದೆ ದೇಶದ ಎಲ್ಲ ಜನರ ಭಾವೈಕ್ಯತೆ ಹಾಗೂ ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಲಾಯಿತು.  

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಎಲ್ಲ ಸಮುದಾಯಗಳ ನಡುವೆ ಪರಸ್ಪರ ಗೌರವ ಮತ್ತು ವಿಶ್ವಾಸ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ತಿಳಿಸಿದರು.  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌., ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೊಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.