ರೋಗಿಗಳ ಸುರಕ್ಷಿತ ಆರೈಕೆ ನಮ್ಮೆಲ್ಲರ ಜವಾಬ್ದಾರಿ: ಡಾ. ವೀರೇಂದ್ರ ಕುಮಾರ್ ಕೆ.ಜಿ

ರೋಗಿಗಳ ಸುರಕ್ಷಿತ ಆರೈಕೆ ನಮ್ಮೆಲ್ಲರ ಜವಾಬ್ದಾರಿ: ಡಾ. ವೀರೇಂದ್ರ ಕುಮಾರ್ ಕೆ.ಜಿ Safe patient care is the responsibility of us all: Dr. Veerendra Kumar K.G.

ಲೋಕದರ್ಶನ ವರದಿ

        ಬಳ್ಳಾರಿ,ಸೆ.22 :  ರೋಗಿಗಳಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆರೋಗ್ಯ ಸೇವೆಗಳನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ರೋಗಿಗಳ ಸಮಗ್ರ ಆರೈಕೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ವಿಭಾಗ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗುಗ್ಗರಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಗುಗ್ಗರಹಟ್ಟಿಯ ನಗರ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ವಿಶ್ವ ರೋಗಿಗಳ ಸುರಕ್ಷತಾ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಪ್ರತಿ ವರ್ಷ ಸೆಪ್ಟೆಂಬರ್ 16 ರಿಂದ 20 ರವರೆಗೆ ವಿಶ್ವ ರೋಗಿಗಳ ಸುರಕ್ಷತಾ ದಿನ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ರೋಗಿಗಳಿಗೆ ಸುರಕ್ಷಿತ, ಗುಣಮಟ್ಟದ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆ ನೀಡುವ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ “ಸಾಂಕ್ರಾಮಿಕವಲ್ಲದ ರೋಗಿಗಳಿಗೆ ಸುರಕ್ಷಿತ ಆರೈಕೆ” ಎಂಬ ಘೋಷವಾಕ್ಯದೊಂದಿಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.