ಬಾಗಲಕೋಟೆ

ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳ ಸುರಕ್ಷತೆಗೆ ಸುರಕ್ಷತಾ ಕ್ರಮ ಸ್ವಾಗತ

ಸಾಮಾಜಿಕ ಮಾಧ್ಯಮದಲ್ಲಿ ಮಕ್ಕಳ ಸುರಕ್ಷತೆಗೆ ಸುರಕ್ಷತಾ  ಕ್ರಮ ಸ್ವಾಗತ

ಲೋಕದರ್ಶನ ವರದಿ 

  ಬಾಗಲಕೋಟೆ 02: ಅಪ್ರಾಪ್ತ ವಯಸ್ಕರಿಗೆ ಸಾಮಾಜಿಕ ಮಾಧ್ಯಮ ಹಾಗೂ ಇತರ ಡಿಜಿಟಲ್ ವೇದಿಕೆಗಳಲ್ಲಿ ಕಾನೂನುಬದ್ಧ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರ ಪರೀಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ರೀಚ್ ಸಂಸ್ಥೆ ಸ್ವಾಗತಿಸಿದೆ. ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ಹಿನ್ನೆಲೆಯಲ್ಲಿ ಆನ್ಲೈನ್ ಲೈಂಗಿಕ ಶೋಷಣೆ, ಗ್ರೂಮಿಂಗ್, ಮಾನವ ಕಳ್ಳಸಾಗಣೆ, ಸೆಕ್ಸ್ಟಾರ್ಷನ್ ಮತ್ತು ಸೈಬರ್ಬುಲ್ಲಿಂಗ್ನಂತಹ ಅಪಾಯಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ಸಂಸ್ಥೆ ತಿಳಿಸಿದೆ. ರೀಚ್ ಸಂಸ್ಥೆಯು ಜಸ್ಟ್‌ ರೈಟ್ಸ್‌ ಫಾರ್ ಚಿಲ್ಡ್ರನ್ನ ಪಾಲುದಾರ ಸಂಸ್ಥೆಯಾಗಿದ್ದು, ಡಿಜಿಟಲ್ ವೇದಿಕೆಗಳನ್ನು ಬಳಸುವ ಮಕ್ಕಳಿಗೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಭಾಗಿಯಾಗಿತ್ತು.  

ರೀಚ್ ಸಂಸ್ಥೆಯ ನಿರ್ದೇಶಕ ಜಿ.ಎನ್‌. ಸಿಂಹ ಮಾತನಾಡಿ, “ಡಿಜಿಟಲ್ ವೇದಿಕೆಗಳನ್ನು ಭಾರತೀಯ ಕಾನೂನಿನ ಅಡಿಯಲ್ಲಿ ಹೊಣೆಗಾರರನ್ನಾಗಿ ಮಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ಈ ನಿರ್ದೇಶನ ಮಹತ್ವದ ಹೆಜ್ಜೆಯಾಗಿದೆ,” ಎಂದರು.  


ಸುದ್ದಿ ಓದಿ