ಮುಖಂಡ ಅಣ್ಣಾಸಾಬ ಪಾಟೀಲ ಅವರಿಗೆ ಸಹಕಾರ ರತ್ನ ಪ್ರಶಸ್ತಿ; ಅಭಿನಂದನೆಗಳ ಮಹಾಪೂರ..!
ಲೋಕದರ್ಶನ ವರದಿ
ಕಾಗವಾಡ 14: ತಾಲೂಕಿನ ಜುಗೂಳ ಗ್ರಾಮದ ಮುಖಂಡರು, ಚಿಕ್ಕೋಡಿ ಸಿಬಿಕೆಎಸ್ಎಸ್ ಕಾರ್ಖಾನೆಯ ನಿರ್ದೇಶಕರು, ಜುಗೂಳ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಪರಸಗೌಡಾ(ಅಣ್ಣಾಸಾಬ) ಪಾಟೀಲ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿದ್ದು, ಅವರಿಗೆ ಎಲ್ಲ ಕಡೆಯಿಂದ ಅಭಿನಂದನೆಗಳು ಹರಿದು ಬರುತ್ತೀವೆ.
ಸಹಕಾರ ಕ್ಷೇತ್ರದಲ್ಲಿ ಕಳೆದ 35 ವರ್ಷಗಳ ಅವರ ಸೇವೆ ಪರಿಗಣಿಸಿ, ಅಣ್ಣಾಸಾಬ ಪಾಟೀಲ ಇವರನ್ನು ಈ ವರ್ಷದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಶನಿವಾರ ದಿ. 14 ರಂದು ಪ್ರಾರಂಭಗೊಂಡ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ, ಗೌರವಿಸಲಾಯಿತು.
ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಹಕಾರ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಸಹಕಾರಿ ಕ್ಷೇತ್ರದ ಅನೇಕ ಗಣ್ಯರು ಉಪಸ್ಥಿತರಿದ್ದರು. ಇನ್ನೂ ಅಣ್ಣಾಸಾಬ ಪಾಟೀಲ ಅವರಿಗೆ ಪ್ರಶಸ್ತಿ ಲಭಿಸುತ್ತಿದ್ದಂತೆ ವಿವಿಧ ಕ್ಷೇತ್ರದ ಗಣ್ಯರು, ಗ್ರಾಮಸ್ಥರು ಅವರನ್ನು ಅಭಿನಂದಿಸಿದ್ದಾರೆ.