ಆಸ್ಪತ್ರೆಗಳ ಸುತ್ತ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ
Sale of tobacco banned within a 100-yard radius of hospitals
ಲೋಕದರ್ಶನ ವರದಿ
ಬಳ್ಳಾರಿ, 17: ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ರೋಗಿಗಳಿಗೆ ಮುಕ್ತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ವಿಶ್ವಜಿತ್ ಮೆಹತಾ ಸೂಚಿಸಿದರು.
ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಸ್ಪತ್ರೆಗಳ ಸುತ್ತಮುತ್ತ ಕಡ್ಡಾಯ ನಿಷೇಧ
ಕೋಟ್ಪಾ ಕಾಯ್ದೆಯಡಿ ಶಾಲೆ-ಕಾಲೇಜುಗಳಂತೆ ಆಸ್ಪತ್ರೆಗಳೂ ಪ್ರಮುಖ ಆದ್ಯತೆಯ ವಲಯಗಳಾಗಿವೆ. ಆಸ್ಪತ್ರೆಯ ಆವರಣದಿಂದ 100 ಯಾರ್ಡ್ ವ್ಯಾಪ್ತಿಯಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟ ಕಾನೂನುಬಾಹಿರವಾಗಿದೆ ಎಂದು ಅವರು ತಿಳಿಸಿದರು.
ಆಸ್ಪತ್ರೆಗಳ ಪ್ರವೇಶ ದ್ವಾರ ಹಾಗೂ ಸುತ್ತಮುತ್ತಲಿನ ಗೋಡೆಗಳ ಮೇಲೆ ‘ಇದು ತಂಬಾಕು ಮುಕ್ತ ವಲಯ, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು’ ಎಂಬ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.
ಅಕ್ರಮ ಮಾರಾಟದ ವಿರುದ್ಧ ದಾಳಿ
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ತಡೆಗೋಡೆಯ ಹೊರಭಾಗದಲ್ಲಿರುವ ಸಣ್ಣಪುಟ್ಟ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಹೆಚ್ಚಾಗಿ ಕಂಡುಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ನೀರೀಕ್ಷಕರು ಜಂಟಿ ದಾಳಿ ನಡೆಸಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು, ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಿದರು.
ನಿಯಮ ಉಲ್ಲಂಘನೆಗೆ ದಂಡ
ರಾಜ್ಯ ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಡಾ. ಮಹಾಂತೇಶ್ ಉಳ್ಳಾಗಡ್ಡಿ ಮಾತನಾಡಿ, ಜಿಲ್ಲೆಯ ಯಾವುದೇ ಶೈಕ್ಷಣಿಕ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
ಕೋಟ್ಪಾ ನಿಯಮ ಉಲ್ಲಂಘಿಸುವ ಅಂಗಡಿಗಳ ವಿರುದ್ಧ ಕಠಿಣ ಆರ್ಥಿಕ ದಂಡ ವಿಧಿಸಲು ಅವಕಾಶವಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘನೆಗೆ ?4,000 ದಂಡ ಹಾಗೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ?3,000 ದಂಡ ವಿಧಿಸಲಾಗುತ್ತದೆ. ಉಲ್ಲಂಘನೆ ಮುಂದುವರಿದರೆ ಪ್ರತಿದಿನ ?100 ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ವರ್ಷದ ಪರವಾನಗಿ ಶುಲ್ಕ ?500 ಹಾಗೂ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ವರ್ಷದ ನವೀಕರಣ ಶುಲ್ಕ ?500 ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 