ಶಿಗ್ಗಾವ್

ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಗೆ ಸಲೀಂ ಅಹ್ಮದ್ ಚಾಲನೆ

ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಗೆ ಸಲೀಂ ಅಹ್ಮದ್ ಚಾಲನೆ

ಶಿಗ್ಗಾವಿ 12 : ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ವಿಪ ಸದಸ್ಯ ಸಲೀಂ ಅಹ್ಮದ್ ಹೇಳಿದರು. 

ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಎಲ್ಲರೂ ಸಂಭ್ರಮಿಸುವ ದಿನವಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಸಮಯದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳ ಪೈಕಿ ಮೊದಲನೇ ಭರವಸೆಯನ್ನು ಸರ್ಕಾರ ರಚನೆಯಾದ ತಿಂಗಳ ಒಳಗಾಗಿ ಈಡೇರಿಸಲಾಗಿದೆ. ನಮ್ಮ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆ ಜಾರಿಗೊಳಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ದಿನವಾಗಿದೆ ಎಂದರು. 

ತಹಶೀಲ್ದಾರ ಸಂತೋಷ ಹಿರೇಮಠ, ಕಾಂಗ್ರೇಸ ಬ್ಲಾಕ ಅಧ್ಯಕ್ಷ ಶಂಭುಲಿಂಗಪ್ಪ ಆಜೂರ, ಮುಖಂಡರಾದ ಯಾಸೀರ್ ಖಾನ್ ಪಠಾಣ್, ಸೋಮಣ್ಣ ಬೇವಿನಮರದ, ಪ್ರಕಾಶ ಹಾದಿಮನಿ, ಸುಧೀರ ಲಮಾಣಿ, ಎಸ್‌.ಎಫ್‌. ಮಣಕಟ್ಟಿ, ಪುರಸಭೆ ಸದಸ್ಯ ಗೌಸಖಾನ ಮುನಶಿ, ವಸಂತಾ ಬಾಗೂರ, ಕರೀಂ ಮೊಗಲಲ್ಲಿ, ಮುನ್ನಾ ಲಕ್ಷ್ಮೇಶ್ವರ, ಅತ್ತಾವುಲ್ಲಾ ಖಾಜೇಖಾನವರ, ಮಲ್ಲಿಕಾರ್ಜುನಗೌಡ ಪಾಟೀಲ, ಬೀಮಣ್ಣಾ ಹೊಟ್ಟುರ, ಅಶೋಕ ಓಲೇಕಾರ, ಪ್ರೇಮಾ ಪಾಟೀಲ, ಗುರುನಗೌಡ ಪಾಟೀಲ, ಮಂಜುನಾಥ ಮಣ್ಣಣ್ಣವರ, ಬಿ ಸಿ ಪಾಟೀಲ, ಮಾಲತೇಶ ಸಾಲಿ, ಮಲ್ಲಮ್ಮ ಸೋಮನಕಟ್ಟಿ ಸೇರಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಮುಖಂಡರು, ಮಹಿಳೆಯರು ಹಾಗೂ ಸಾರ್ವಜನಿಕರು ಇದ್ದರು. 


ಸುದ್ದಿ ಓದಿ