ರಾಜ್ಯಮಟ್ಟದ ಶಿಕ್ಷಣ ಇಲಾಖೆಯ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಲೋನಿ ಮೆಟ್ರಿಗೆ ಕಂಚಿನ ಪದಕ
ಘಟಪ್ರಭಾ 11: ಕ್ರೈಸ್ಟ್ ಕಾನ್ವೆಂಟ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಸಲೋನಿ ಮೆಟ್ರಿ ಅವರು ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಶಾಲೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.ಸಲೋನಿ ಅವರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.