ಸಮರ್ಥನಂ ಸಂಸ್ಥೆ ಹಾಗೂ ಎಸ್ಬಿಐ ಫೌಂಡೇಶನ್ನಿಂದ ವಿಶೇಷ ಚೇತನರಿಗೆ ಸಾಧನ ಸಲಕರಣೆ ವಿತರಣೆ
Samarthanam Foundation and SBI Foundation distribute equipment to the specially-abled
ಲೋಕದರ್ಶನ ವರದಿ
ಬೆಳಗಾವಿ 02 : ಇಲ್ಲಿನ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಸಮರ್ಥನಂ ಸಂಸ್ಥೆ ಹಾಗೂ ಎಸ್ಬಿಐ ಫೌಂಡೇಶನ್ ಸಹಯೋಗದೊಂದಿಗೆ ಇತ್ತೀಚೆಗೆ ಶ್ರವಣದೋಷವುಳ್ಳ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಬೆಳಗಾವಿ ಶಾಖಾ ಮುಖ್ಯಸ್ಥರಾದ ಶ್ರೀ ಅರುಣಕುಮಾರ್ ಎಮ್. ಜಿ. ಅವರು ಮಾತನಾಡಿ, ವಿಶೇಷ ಚೇತನರ ಸಬಲೀಕರಣಕ್ಕೆ ಸಂಸ್ಥೆ ಸದಾ ಬದ್ಧವಾಗಿದೆ ಎಂದರು.
ಯೋಜನಾ ಸಂಯೋಜಕರಾದ ಶ್ರೀ ಶಿವಕುಮಾರ ಹಲ್ಯಾಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, "ಸಮನ್ವಯ ಶಿಕ್ಷಣದ ಮೂಲಕ ವಿಶೇಷ ಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಗುರಿ. ಇವರ ಬೆಳವಣಿಗೆಯಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ. ಸಂಸ್ಥೆಯು ಜಿಲ್ಲೆಯ ಆಯ್ದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ," ಎಂದು ಮಾಹಿತಿ ನೀಡಿದರು.
ವಿಶೇಷ ಶಿಕ್ಷಕರಾದ ಶ್ರೀ ಸತ್ತೆಪ್ಪಾ ರಾಚಪ್ಪನವರ ಮಾತನಾಡಿ, ಸಮನ್ವಯ ಶಿಕ್ಷಣ ಯೋಜನೆಯಡಿ ಶಾಲಾ ಆವರಣದಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯ, ಕೊಠಡಿ ದುರಸ್ತಿ, ರಾಂಪ್ ನಿರ್ಮಾಣ ಮತ್ತು ಸ್ಮಾರ್ಟ್ ಬೋರ್ಡ್ಗಳ ಸೌಲಭ್ಯ ನೀಡಲಾಗುತ್ತಿದೆ. ಅಲ್ಲದೆ, ಅರ್ಹ ಫಲಾನುಭವಿಗಳಿಗೆ ಕೃತಕ ಕಾಲು, ಗಾಲಿಕುರ್ಚಿ, ವಾಟರ್ ಬೆಡ್ ಸೇರಿದಂತೆ ವಿವಿಧ ಅಗತ್ಯ ಉಪಕರಣಗಳನ್ನು ವಿತರಿಸಲಾಗುತ್ತಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಶುಭಂ ಕಿತ್ತೂರ, ದೀಪಾ, ಮಂಜು ಜಿ. ಹಾಗೂ ಪಾಲಕರು ಮತ್ತು ಮಕ್ಕಳು ಪಾಲ್ಗೊಂಡಿದ್ದರು. ಸಂಸ್ಥೆಯ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕಾರಣ ತಾವುಗಳು ಈ ಸುದ್ದಿಯನ್ನು ತಮ್ಮ ದಿನಪತ್ರಿಕೆಗಳಲ್ಲಿ ಉಚಿತವಾಗಿ ಪ್ರಕಟಿಸಲು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇನೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 