ಸಂಭಾಜಿರಾವ್ ಭಿಡೆ ಜಿಲ್ಲಾ ಪ್ರವೇಶಕ್ಕೆ ನಿಷೇಧ
ಬೆಳಗಾವಿ 19: ಕಾರ್ಯಕ್ರಮಗಳಲ್ಲಿ ಪ್ರಚೋದನಾತ್ಮಕ ಭಾಷಣ ಮಾಡುವ ಆರೋಪದ ಹಿನ್ನೆಲೆ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಭಿಡೆಗೆ ಕನರ್ಾಟಕ, ಜಿಲ್ಲೆಯಲ್ಲಿ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಬೆಳಗಾವಿ ಜಿಲ್ಲಾಧಿಕಾರಿಗಳು ಇದೇ ತಿಂಗಳು 21ರ ಮಧ್ಯರಾತ್ರಿ 12 ಗಂಟೆಯಿಂದ 11 ದಿನಗಳ ಕಾಲ ಜಿಲ್ಲೆ ಪ್ರವೇಶಕ್ಕೆ ನಿಷೇಧ ಮಾಡಿದ್ದಾರೆ. ಜುಲೈ 31ರ ಮಧ್ಯಾಹ್ನ 12 ಗಂಟೆಯವರೆಗೂ ಮಹಾರಾಷ್ಟ್ರದ ಮುಖಂಡ ಸಂಭಾಜಿರಾವ್ ಭಿಡೆಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದ್ದ ಸಂಭಾಜಿರಾವ್ ಭಿಡೆ ಅವರು ಶಿವ ಪ್ರತಿಷ್ಠಾನ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ ಗಲಭೆಗೆ ಬಿಡೆ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು ಎನ್ನಲಾಗುತ್ತಿದೆ. ಸಂಭಾಜಿರಾವ್ಗೆ ಆಹ್ವಾನಿಸಿದ್ದ ಸಂಕೇಶ್ವರದ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದ ಸಂಭಾಜಿರಾವ್ ಬಿಡೆ 'ದಿ ಹಿಸ್ಟರಿ ಆಫ್ ರಾಯಘಡ ಸುವರ್ಣ ಸಿಂಹಾಸನ' ವಿಷಯದ ಕುರಿತು ಉಪನ್ಯಾಸ ನೀಡಲಿದ್ದರು. ಸಂಭಾಜಿರಾವ್ ಪ್ರಚೋದನಕಾರಿ ಭಾಷಣದಿಂದ ಸಮಾಜದ ಶಾಂತಿ ಕಡದಬಾರದು ಮತ್ತು ಯಾವುದೇ ಜನಾಂಗದ ಭಾವನೆಗೆ ಧಕ್ಕೆ ಆಗಬಾರದೆಂದು ಮುಂಜಾಗೃತ ಕ್ರಮವಾಗಿ ಕನರ್ಾಟಕ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಹೊರಡಿಸಿರುವ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 