ಅಂತರರಾಷ್ಟ್ರೀಯ

ಸ್ಯಾನ್ ಫ್ರಾನ್ಸಿಸ್ಕೋ ; ಸಚಿವ ನಿರಾಣಿ ಉದ್ಯಮ ಸಂವಾದ ಸಭೆ

ಸ್ಯಾನ್ ಫ್ರಾನ್ಸಿಸ್ಕೋ ;  ಸಚಿವ ನಿರಾಣಿ ಉದ್ಯಮ ಸಂವಾದ ಸಭೆ

ಸ್ಯಾನ್ ಫ್ರಾನ್ಸಿಸ್ಕೋ: ಸೆಪ್ಟೆಂಬರ್ 11 : ರಾಜ್ಯ  ಬೃಹತ್ ಮತ್ತು ಮಧ್ಯಮ  ಪ್ರಮಾಣದ ಕೈಗಾರಿಕೆಗಳ ಸಚಿವ ಡಾ.ಮುರುಗೇಶ್ ಆರ್ ನಿರಾಣಿ  ಸ್ಯಾನ್ ಫ್ರಾನಿಸ್ಕೋದಲ್ಲಿ ಆಯೋಜಿತವಾಗಿದ್ದ ಉದ್ಯಮ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು

ಅವರು ಶನಿವಾರ ಸಂಜೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯೆಲ್ ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿದರು.

 ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತದ ಕಾನ್ಸುಲೇಟ್ ಜನರಲ್ ಈ  ಸಭೆಯನ್ನು ಆಯೋಜಿಸಿದ್ದರು. 2022ರ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿಯಾಗಿ,  ಬಂಡವಾಳ ಹೂಡಿಕೆ ಆಕರ್ಷಿಸಲು ಡಾ. ಮುರುಗೇಶ ಆರ್ ನಿರಾಣಿ ನೇತೃತ್ವದ  ನಿಯೋಗ ಅಮೆರಿಕಕ್ಕೆ ಭೇಟಿ ನೀಡಿದೆ.

ಸುದ್ದಿ ಓದಿ