ಮನರಂಜನೆ

ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ

ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಫೆಬ್ರವರಿ 14: ಸ್ಯಾಂಡಲ್ ವುಡ್ ಹಿರಿಯ ನಟ ರಾಜೇಶ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆರೋಗ್ಯದ ಕಾರಣ ಕೆಲ ದಿನಗಳ ಕಾಲ ಚಿತ್ರರಂಗದಿಂದ ಹೊರಗುಳಿದಿದ್ದ ರಾಜೇಶ್ ಅವರು ಎಂ.ಜಿ ಶ್ರೀನಿವಾಸ್ ನಿರ್ದೇಶನದ ಓಲ್ಡ್ ಮಂಕ್ ಸಿನಿಮಾದಲ್ಲಿ ಅಭಿನಯಿಸಿದ್ದರು. ಅವರ ಪತ್ನಿ ಕಳೆದ ವರ್ಷ ನವೆಂಬರ್ ನಲ್ಲಿ ಕೊನೆಯುಸಿರೆಳೆದಿದ್ದರು.

ದೇವರ ಗುಡಿ, ಕಪ್ಪು ಬಿಳುಪು, ಬೃಂದಾವನ, ಸೊಸೆ ತಂದ ಸೌಭಾಗ್ಯ ಹೀಗೆ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಿರುವ ರಾಜೇಶ್ ಕಲಾ ತಪಸ್ವಿ ರಾಜೇಶ್ ಎಂಬ ಆತ್ಮಚರಿತ್ರೆಯನ್ನು ಬರೆದಿದ್ದಾರೆ.

ಸುದ್ದಿ ಓದಿ