ಸಂಡೂರು: ಶಾಲಾ ಮಕ್ಕಳೊಂದಿಗೆ ಸಂವಾದ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯಪ್ರವೃತ್ತರಾಗಬೇಕು: ಶಶಿಧರ್ ಕೋಸಂಬೆ
Sandur: Officers should be proactive in interacting with school children: Shashidhar Kosambe
ಬಳ್ಳಾರಿ 01: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಾಗೂ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಂಡೂರು, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಹಾಗೂ ಭಾಗಿದಾರರ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಸಂಡೂರು ಪಟ್ಟಣದ ಎಪಿಎಂಸಿ ಹತ್ತಿರದ ಸರ್ಕಾರಿ ಪ್ರೌಢ ಶಾಲೆಯ ಸಭಾಂಗಣದಲ್ಲಿ ಶನಿವಾರ ಏರಿ್ಡಸಿದ್ದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಿವಿಧ ಮಾದರಿ ಶಾಲೆಗಳ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸುಸಜ್ಜಿತ ಕಟ್ಟಡ, ಮೂಲಭೂತ ಸೌಲಭ್ಯಗಳು ಮತ್ತು ಹಿತಕರ ವಾತಾವರಣ ಕಲ್ಪಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ನಿರ್ದೇಶನ ನೀಡಿದರು.
ಮಕ್ಕಳ ಹಕ್ಕುಗಳು ಸಂವಿಧಾನ ಬದ್ಧವಾಗಿದ್ದು, ಮಕ್ಕಳಿಗೆ ಕಾನೂನಾತ್ಮಕ ಸಮಸ್ಯೆ ಎದುರಾದಲ್ಲಿ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆಗಳನ್ನು ಮುಕ್ತವಾಗಿ ಹೇಳಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಮಕ್ಕಳ ರಕ್ಷಣೆ ಹಾಗೂ ಕಾನೂನು ಸುರಕ್ಷತೆ ಕಾಪಾಡಲು ಮತ್ತು ಪೊಲೀಸ್ ಇಲಾಖೆಯು ಮಕ್ಕಳೊಂದಿಗೆ ಸ್ನೇಹಿ ಸಂಬಂಧ ಬೆಸೆಯಲು ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಕಾನೂನು ಸಲಹೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಡ್ಡಾಯವಾಗಿ ಮಾಹಿತಿ ನೀಡಬೇಕು. ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು, ಈ ನಿಟ್ಟಿನಲ್ಲಿ ಶಾಲಾ ಆವರಣದ 100 ಮೀ. ಅಂತರದಲ್ಲಿ ಧೂಮಪಾನ, ತಂಬಾಕು ಮಾರಾಟ ಮಾಡಿದ್ದಲ್ಲಿ ಕೂಡಲೇ ತೆರವುಗೊಳಿಸಬೇಕು. ವಿಶೇಷವಾಗಿ ಶಾಲಾ ಆವರಣದಲ್ಲಿ ಪುಂಡರ ಹಾವಳಿ ತಡೆಗಟ್ಟಲು ಪೊಲೀಸ್ ಸಿಬ್ಬಂದಿ ಬೀಟ್ ಮೂಲಕ ಪರೀಶೀಲಿಸಬೇಕು ಎಂದು ಪೊಲೀಸ್ ಇಲಾಖೆಗೆ ಆಯೋಗದ ಅಧ್ಯಕ್ಷರು ನಿರ್ದೇಶನ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಸ್ ಸಮಸ್ಯೆಗಳ ಆಗರ ಕೇಳಿ ಬಂದ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಬಸ್ ಸಂಚಾರ ವ್ಯವಸ್ಥೆ ಒದಗಿಸಬೇಕೆಂದು ಸಾರಿಗೆ ಇಲಾಖೆಯ ಘಟಕ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 