ಸಂಗೊಳ್ಳಿ ರಾಯಣ್ಣ ಜಯಂತಿ, ಸ್ವಾತಂತ್ರ್ಯೋತ್ಸವ ಸಂಭ್ರಮ
Sangolli Rayanna Jayanti and Independence Day Celebrations
ವಿಜಯಪುರ 20: ದೇಶದ ಸ್ವಾತಂತ್ರ್ಯ ಹೋರಾಟದ ವೀರ ಸೇನಾನಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ 228ನೇ ಜನ್ಮದಿನೋತ್ಸವ ಹಾಗೂ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜಯಪುರ ನಗರದ ಬುರಣಾಪುರ ಕನಕದಾಸ ನಗರದಲ್ಲಿರುವ ಸರ್ವೆ ನಂ.53ರ ವಿಶಾಲ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಭೀಮಣ್ಣ ದೇವಸ್ಥಾನದ ಶ್ರೀ ಭೀಮಣ್ಣ ಪೂಜಾರಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಿತು. ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರ ಶೌರ್ಯ, ತ್ಯಾಗ ಮತ್ತು ದೇಶಪ್ರೇಮ ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು. ಯುವಜನತೆ ಹಾಗೂ ವಿದ್ಯಾರ್ಥಿಗಳು ರಾಯಣ್ಣ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮುಖಂಡ ದೇವಾನಂದ ಚವ್ಹಾಣ, ಬಿಜೆಪಿ ಮುಖಂಡ ಉಮೇಶ ಕಾರಜೋಳ, ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಕಾಂತಾ ನಾಯ್ಕ, ಬಿಜೆಪಿ ಮುಖಂಡ ವಿಜುಗೌಡ ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಸ್ಥಳೀಯ ಮಾಜಿ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು.
ಶಾಲಾ ಮಕ್ಕಳಲ್ಲಿ ಬಾಲ್ಯದಿಂದಲೇ ರಾಷ್ಟ್ರೇ್ರಮ ಬೆಳೆಸುವ ಉದ್ದೇಶದಿಂದ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ದೇಶಭಕ್ತಿ ನೃತ್ಯರೂಪಕ ಹಾಗೂ ನಾಟಕ ಪ್ರದರ್ಶಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ವಿದ್ಯಾರ್ಥಿಗಳಿಗೆ ಪುಸ್ತಕಗಳು ಹಾಗೂ ಪ್ರೋತ್ಸಾಹಧನದ ಬಹುಮಾನ ನೀಡಿ ಗೌರವಿಸಲಾಯಿತು.
ಅಮೃತ ಮಾವಿನಹಳ್ಳಿ, ಪರಶುರಾಮ ಕರವಿನಾಳ, ಸಂತೋಷ ರೋಗಿ, ಈಶ್ವರ್ಪ ಶೂರ, ಪ್ರತಾಪ ನಾಗರಗೋಜಿ, ಮುದಕಪ್ಪ ಗೌಡ ಪಾಟೀಲ, ಹನುಮಂತ ಪುಟ್ಟಿ, ತಾಯಪ್ಪ ಮಾನೆ, ಭೀಮರಾಯ ಪೂಜಾರಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ವಿವಿಧ ಗಣ್ಯರ ಸಹಕಾರದಿಂದ ಸಮಾರಂಭವು ಅದ್ದೂರಿಯಾಗಿ ನೆರವೇರಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 