ಡ್ರಗ್ ಮಾಫಿಯಾ; ಸಂಜನಾ ಗುಲ್ರಾನಿ ಜಾಮೀನು ಅರ್ಜಿ ಸೆ.19ಕ್ಕೆ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 18: ಡ್ರಗ್ ಮಾಫಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಸಂಜನಾ ಗುಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಸೆ.19ಕ್ಕೆ ಮುಂದೂಡಿದೆ.
ಸಂಜನಾ ಅವರು ಡ್ರಗ್ ಮಾಫಿಯಾ ದಂಧೆಯಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಜನಾ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.