ಗುಳೇಗುಡ್ಡ

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿ ಸಂಜಯ ನೇಮಕ

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿ ಸಂಜಯ ನೇಮಕ

ಗುಳೇದಗುಡ್ಡ 18: ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಸಮಿತಿಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಪಟ್ಟಣದ ಕಾಂಗ್ರೇಸ್ ಮುಖಂಡ ಸಂಜಯ ಬರಗುಂಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ನೇಮಕ ಆದೇಶದಲ್ಲಿ ಅವರು, ಸಂಜಯ ಸಂಗಪ್ಪ ಬರಗುಂಡಿ ತಕ್ಷಣ ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ಸಿನ  ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೇಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಡಿ.ಕೆ.ಶಿವಕುಮಾರ ಸೂಚಿಸಿದ್ದಾರೆ.  

ಸಂಜಯ ಬರಗುಂಡಿ ಪಟ್ಟಣದ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಇವರು ಕನ್ನಡ ಕಾವಲು ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಲ್ಲಿನ ಕಾಂಗ್ರೇಸ್ ಮುಖಂಡ ಹೊಳಬಸು ಶೆಟ್ಟರ್ ಸೇರಿದಂತೆ ಇನ್ನಿತರರು ಸಂಜಯ ಬರಗುಂಡಿ ಅವರನ್ನು ಅಭಿನಂದಿಸಿದ್ದಾರೆ. 


ಸುದ್ದಿ ಓದಿ