ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಂಜೀವಿನಿ ಯೋಜನೆ ವರದಾನ : ಪಿ.ಡಿ.ಓ ಶೇಷಗಿರಿ
Sanjeevini scheme a boon for women's economic self-reliance: PDO Sheshagiri
ಕಂಪ್ಲಿ 04 : ಜೀವನದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಮುಂದೆ ಬರಲು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಪಿಡಿಒ ಹಾಲರಿ್ವ ಶೇಷಗಿರಿ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗ್ರಾಪಂ ಹಾಗೂ ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಏರಿ್ಡಸಿದ್ದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸರಕಾರ ಸಂಜೀವಿನಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಮಹಿಳೆಯರಿಗೆ ವೃತ್ತಿ ತರಬೇತಿ ನೀಡುವ ಜತೆಗೆ ಆರ್ಥಿಕ ನೆರವು ನೀಡುತ್ತದೆ. ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟವು ಗ್ರಾಮದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಂಜೀವಿನಿಯಾಗಿದೆ ಎಂದರು.
ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಲತಾ ರೆಡ್ಡಿ ಮಾತನಾಡಿ, ಸಂಜೀವಿನಿ ಯೋಜನೆಯೂ ಮಹಿಳೆಯರ ಬದುಕಿಗೆ ದಾರಿ ದೀಪವಾಗಿದೆ. ಈ ಯೋಜನೆಗಳ ಸದುಪಯೋಗದೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದರು. ಗ್ರಾಪಂ ಅಧ್ಯಕ್ಷ ರಮಣಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಈಶ್ವರಿ, ಸಂಪನ್ಮೂಲ ವ್ಯಕ್ತಿ ಶ್ರೀಗೌರಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಬಸಮ್ಮ, ವರಲಕ್ಷ್ಮಿ, ಬಿಆರ್‌ಪಿ ಅಶ್ವಿನಿ, ಪಶುಸಕಿ ರೇಖಾ, ಕೃಷಿಸಕಿ ವಸಂತಿ, ನಾರಿಸಕಿ ವೀಣಾ, ಒಕ್ಕೂಟದ ಸಿಬ್ಬಂದಿಗಳಾದ ಉಮಾ ಶಂಕರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 