ಸಂಕೇಶ್ವರ ಬಳಿ ದ್ವಿಚಕ್ರ ವಾಹನಕ್ಕೆ ಅಜ್ಞಾತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲಿಯೇ ಸಾವು : ಅಜ್ಞಾತ ವಾಹನಕ್ಕಾಗಿ ಪೊಲೀಸರ ಶೋಧ
ಬೆಳಗಾವಿ/ಸಂಕೇಶ್ವರ : ಅಜ್ಞಾತ ವಾಹನವೊದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರು ಘಟನೆ ಜಿಲ್ಲೆಯ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸ್ಥಳದಲ್ಲಿ ಮೃತಪಟ್ಟಿರುವ ವ್ಯಕ್ತಿಯು ಯಾವ ಊರಿನವರು ಎನ್ನುವ ಬಗ್ಗೆ ಇನ್ನು ವರೆಗೆ ಮಾಹಿತಿ ಲಭ್ಯವಾಗಿರುವದಿಲ್ಲ. ಈ ಅಪಘಾತದಲ್ಲಿ ಬೈಕ್ ಸವಾರನ ಶವವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಬೈಕ್ ಗೆ ಡಿಕ್ಕಿ ಹೊಡೆದು ಫರಾರಿಯಾಗಿರುವ ಅಜ್ಞಾತ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಮತ್ತು ಪಿಎಸ್ ಐ ಶಿವರಾಜ್ ನಾಯಿಕವಾಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.