ಸಂತೋಷ ಹಜಾರೆ ನಿಧನ
ಮುಂಡಗೋಡ: ತಾಲೂಕಿನ ಕಾತೂರ ಗ್ರಾ.ಪಂ ಪಿ.ಡಿ.ಒ ಸಂತೋಷ ಹಜಾರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಇವರು, ಕಳೆದ 8 ವರ್ಷಗಳಿಂದ ತಾಲೂಕಿನ ಚವಡಳ್ಳಿ, ಇಂದೂರ ಹಾಗೂ ಕಾತೂರ ಗ್ರಾ.ಪಂ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೃತರು ಪತ್ನಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ.