ಜನಜೀವನ ಉತ್ತಮಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಶಾಸಕ ಪೂಜಾರ
ರಾಣಿಬೆನ್ನೂರ 04: ಪ್ರತಿಯೋಬ್ಬರಿಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಕಂದಾಯ ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದೆ.ಇದರೂಂದಿಗೆ ಪಂಚಾಯತ್ ರಾಜ್ ಇಲಾಖೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಸಮನ್ವಯ ಮಾಡಿಕೊಂಡು ಗ್ರಾಮೀಣ ಭಾಗದ ಜನಜೀವನವನ್ನು ಉತ್ತಮಪಡಿಸುವ. ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ರಸ್ತೆ, ಚಂರಡಿ ವಿದ್ಯುತ್ ಪೂರೈಕೆ ಬಸ್ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರಲ್ಲದೆ ಆಧಾರಕಾರ್ಡ ತಿದ್ದುಪಡಿ, ಪಡಿತರಚೀಟ ತಿದ್ದುಪಡಿ ಸರಿಪಡಿಸಿ, ವೃದ್ಧರ, ವಿಧವೆಯರ, ಅಂಗವಿಕಲರ ಮಾಶಾಸನಗಳನ್ನು ಸ್ಥಳದಲ್ಲಿಯೇ ಮಂಜೂರಾತಿ ನೀಡಲಾಗುವುದು. ಸಿಎಂ ಯಡಿಯೂರಪ್ಪನವರು ಪ್ರತಿ ತಿಂಗಳು ಮೂರನೇಯ ಶನಿವಾರ ಪ್ರತಿ ತಾಲೂಕಿನ ಒಂದು ಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡುವ ಮೂಲಕ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಅವರು ತಾಲೂಕಿನ ನೂಕಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ತಾಲೂಕಾಡಳಿತ ಹಾಗೂ 32 ಇಲಾಖೆಗಳ ಎಲ್ಲ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆ ಹರಿಸುವ ಸರ್ಕಾರ ಹಳ್ಳಿಯ ಕಡೆಗೆ ಎಂಬ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವೃದ್ಧರ, ವಿಧವೆಯರ, ಅಂಗವಿಕಲರ, ಬಡ ರೈತರ, ದೀನ ದಲಿತರ ಸಮಸ್ಯೆಗಳನ್ನು ಹೊತ್ತು ಸರ್ಕಾರದ ವಿವಧ ಕಚೇರಿಗಳಿಗೆ ಅಲೆಯಬಾರದು ಎಂಬ ಸದುದ್ದೇಶದಿಂದ ಅವರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆ ಹರಿಸುವ ಸರ್ಕಾರ ಹಳ್ಳಿಯ ಕಡೆಗೆ ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ಇತ್ಯರ್ಥ ಪಡಿಸಲಾಗುವುದು. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು
ತಹಶೀಲ್ದಾರ ಶಂಕರ ಜಿ.ಎಸ್, ನಗರಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ,ವೈಟಿಹೂನ್ನತಿ ಗ್ರಾಮ ಪಂಚಾಯಿತಿ ಅದ್ಯಕ್ಷೆ ಕಲ್ಪನಾ ರವಿ ಮಳ್ಳಲ್ಲಿ ಗ್ರಾಪಂ ಸದಸ್ಯ ಲಕ್ಷ್ಮಪ್ಪ ಚವ್ಹಾಣ ಲೂಕಪ್ಪ ಲಮಾಣಿ ಮಂಜಣ್ಣ ವಡ್ಡರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ ಆರ್ ಮಲ್ಲಾಡದ. ಉಪಾಧ್ಯಕ್ಷರು, ಸದಸ್ಯರು ಮತ್ತು ಪಿಡಿಓಗಳು 18 ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನಂತರ ಸಾರ್ವಜನಿಕರಿಂದ ಬಂದ ಅವ್ಹಾಲಗಳನ್ನು ಸಂಬಂದಿಸಿದ ಅಧಿಕಾರಿಗಳು ಸ್ವೀಕರಿಸಿದರು. ತದನಂತರ ಶಾಸಕರು ಅವರ ಕುಂದು ಕೊರತೆಗಳಿಗೆ ಸ್ಪಂದಿಸಿ ಪರಿಹಾರ ನೀಡಲು ತಾಲೂಕಾ ದಂಡಾಧಿಕಾರಿ ಶಂಕರ ಜಿ.ಎಸ್ ಅವರಿಗೆ ಸೂಚನೆ ನೀಡಿದರು.