ಸರ್ವಧರ್ಮ ಶರಣ ನವರಾತ್ರಿ ದಸರಾ ಧರ್ಮ ಸಮ್ಮೇಳನ

ಸರ್ವಧರ್ಮ ಶರಣ ನವರಾತ್ರಿ ದಸರಾ ಧರ್ಮ ಸಮ್ಮೇಳನ  Sarvadharma Sharana Navaratri Dasara Religious Conference


ಜಮಖಂಡಿ 16: ನಗರದ ಮುರುಗೋಡ ಕಲ್ಯಾಣ ಮಂಟಪದಲ್ಲಿ ಅ.10ರಿಂದ ಸತತ 11 ದಿನಗಳ ಕಾಲ ರಂಭಾಪುರಿ ಜಗದ್ಗುರುಗಳ ನೇತೃತ್ವದಲ್ಲಿ ಸರ್ವಧರ್ಮ ಶರಣ ನವರಾತ್ರಿ ದಸರಾ ಧರ್ಮ ಸಮ್ಮೇಳನ ಆಯೋಜಿಸಲಾಗಿದೆ.  

ನಗರದ ದಾನಮ್ಮ ದೇವಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಗೂಡೂರು ಮಠದ ಅನ್ನದಾನ ಶ್ರೀಗಳು, ಕಾರ್ಯಕ್ರಮವು ಕೇವಲ ವೀರಶೈವ ಲಿಂಗಾಯತ ಸಮಾಜಕ್ಕೆ ಸೀಮಿತವಾಗದೆ ಎಲ್ಲ ಸಮಾಜಗಳ ಸಹಕಾರದೊಂದಿಗೆ ನಡೆಯಲಿದೆ ಎಂದು ಹೇಳಿದರು.  

ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸುವ ನಿಟ್ಟಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಲಾಗುವುದು. ಇದಕ್ಕಾಗಿ ಎಲ್ಲ ಶ್ರೀಮಠಗಳ ಪೂಜ್ಯರ ಸಲಹೆ, ಸೂಚನೆ ಪಡೆದು ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.  

ಬಾಲೇಹೊನ್ನೂರು ರಂಭಾಪುರಿ ವೀರಸಿಂಹಾಸನಾಧೀಶ್ವರ 1008 ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮ ಪ್ರತಿಯೊಬ್ಬರ ಜೀವನಕ್ಕೆ ದಾರೀದೀಪವಾಗಲಿ ಎಂದು ತಿಳಿಸಿದರು.  

ಪೂರ್ವಭಾವಿ ಸಭೆಯಲ್ಲಿ ಕಲ್ಯಾಣಮಠದ ಗೌರಿಶಂಕರ ಶಿವಾಚಾರ್ಯರು, ಮುತಿನಕಂಠಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು, ಶೂರ​‍್ಾಲಿಯ ಸುನಂದಮ್ಮ ತಾಯಿಯವರು, ಜೆ.ಕೆ.ಮಠದ ಮುತ್ತಣ್ಣ ಹಿಪ್ಪರಗಿ, ಮಾದೇವ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.