ಸರ್ವಜ್ಞ ವಿದ್ಯಾಪೀಠ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
Sarvajna Vidyapeeth: Dialogue program with students
ಸರ್ವಜ್ಞ ವಿದ್ಯಾಪೀಠ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ತಾಳಿಕೋಟಿ 06: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಯು.ಬಿ.ಧರಿಕಾರ ಅವರು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಮಂಗಳವಾರ ಸಂವಾದ ನಡೆಸಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯಲು ಯಾವ ಕೌಶಲ್ಯವನ್ನು ಉಪಯೋಗಿಸಬೇಕು ಎಂಬದರಕುರಿತು ತಿಳಿಸುತ್ತಾ ಕಳೆದ ಸಾಲಿನಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಮಕ್ಕಳ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಮಕ್ಕಳಿಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಕೊಟ್ಟು ಉತ್ತರ ಬರೆಯಿಸಿ ಮೌಲ್ಯಮಾಪನ ಮಾಡಿ ಮಕ್ಕಳು ಅವರು ಬರೆದಿರುವ ಉತ್ತರ ಪತ್ರಿಕೆಯನ್ನು ಕೊಟ್ಟು ಸ್ಮಾರ್ಟ್ ಬೋರ್ಡ್ ನಲ್ಲಿ ರಾಜ್ಯಕ್ಕೆ ಪ್ರಥಮ ಬಂದಂತಹ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಅನಾವರಣಗೊಳಿಸಿ ಆ ಮಕ್ಕಳು ಬರೆದಿರುವ ಉತ್ತರ ಪತ್ರಿಕೆ ಹಾಗೂ ತಾವು ಬರೆದಿರುವ ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳು ಸ್ವತಹ ಪರೀಶೀಲನೆ ಮಾಡಿಕೊಂಡು ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಳ್ಳಲು ಅಲ್ಲಿ ಬಳಸಿರುವ ಕೌಶಲ್ಯ ಹಾಗೂ ಉತ್ತರ ಬರೆಯುವ ಶೈಲಿಯನ್ನು ತಿಳಿದುಕೊಳ್ಳುವುದು ಇದರಿಂದ ನೂರಕ್ಕೆ ನೂರು ಅಂಕ ಪಡೆಯಲು ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳಲು ಮಕ್ಕಳಿಗೆ ಸಾಧ್ಯವಾಗುತ್ತದೆ ಎಂದರು.
ಸಂವಾದ ಕಾರ್ಯಕ್ರಮದಲ್ಲಿ ತಾಳಿಕೋಟಿ ಕ್ಲಸ್ಟರ್ ಸಿ.ಆರಿ್ಸ.ರಾಜು ವಿಜಾಪುರ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು, ಮುಖ್ಯ ಶಿಕ್ಷಕ ಸಂತೋಷ ಪವಾರ ಹಾಗೂ ವಿದ್ಯಾರ್ಥಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 