ತಾಳಿಕೋಟಿ

ಸರ್ವಜ್ಞ ವಿದ್ಯಾಪೀಠ: ಚೆನ್ನಮ್ಮ ಜಯಂತಿ ಆಚರಣೆ

ಸರ್ವಜ್ಞ ವಿದ್ಯಾಪೀಠ: ಚೆನ್ನಮ್ಮ ಜಯಂತಿ ಆಚರಣೆ

 ತಾಳಿಕೋಟಿ 23: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ರವರ ಜಯಂತೋತ್ಸವವನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ. ಮಂಗಳೂರು ಅವರು ಮಾತನಾಡಿ ವೀರರಾಣಿ ಕಿತ್ತೂರು ಚೆನ್ನಮ್ಮ ಸ್ವಾಭಿಮಾನ ಮತ್ತು ದೇಶಾಭಿಮಾನದ ಪ್ರತೀಕವಾಗಿದ್ದಾಳೆ. ದೇಶದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆಯಾಗಿದ್ದಾಳೆ. ಚೆನ್ನಮ್ಮಳ ಬದುಕಿನ ಆದರ್ಶ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ದೇಶ ಪ್ರೇಮದೊಂದಿಗೆ ದೇಶದ ರಕ್ಷಣೆಗಾಗಿ ಬದುಕುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಇದ್ದರು. 


ಸುದ್ದಿ ಓದಿ