ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಾಜಿ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ
ಚೆನ್ನೈ,
ನವೆಂಬರ್ 09: ತಮಿಳುನಾಡಿನಲ್ಲಿ ಮಾಜಿ ಅಧಿಕಾರಿಗಳು ರಾಜಕೀಯ ಸೇರುವ ಸಮಯ. ಸೋಮವಾರ ಮಾಜಿ ಐಎಎಸ್ಅಧಿಕಾರಿ ಸಸಿಕಾಂತ್ ಸೆಂಥಿಲ್ ಅಧಿಕೃತವಾಗಿ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ
ಸೇರ್ಪಡೆಯಾದರು.
2019ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ , ಈಗ ರಾಜಕೀಯಕ್ಕೆ ಅಖಾಡಕ್ಕೆ ಇಳಿದಿದ್ದಾರೆ..ನಾನು ರಾಜಕೀಯ ಬರಲು ತೀರ್ಮಾನಿ, ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ" ಎಂದು ಭಾನುವಾರವಷ್ಟೆ ಹೇಳಿಕೆ ನೀಡಿದ್ದರು.ಸಸಿಕಾಂತ್ ಸೆಂಥಿಲ್ 2009ನೇ ಬ್ಯಾಚ್ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ. 2017ರ ಅಕ್ಟೋಬರ್ 10ರಿಂದ 2019ರ ಸೆಪ್ಟೆಂಬರ್ ವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದರು.
ರಾಜೀನಾಮೆ ಬಳಿಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಸಿಎಎ, ಎನ್ಆರ್ಸಿ ವಿರುದ್ಧ ನಡೆದ ಅನೇಕ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ತಮಿಳುನಾಡು ಮೂಲದ ಅಣ್ಣಾಮಲೈ ಅವರು ಈಗಾಗಲೇ ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದಾರೆ. ಪಕ್ಷ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ನೀಡಿದೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ 7 ತಿಂಗಳು ಬಾಕಿ ಇದೆ. ಸಸಿಕಾಂತ್ ಸೆಂಥಿಲ್ ಮತ್ತು ಅಣ್ಣಾಮಲೈ ಅವರು ರಾಜ್ಯ ರಾಜಕೀಯದಲ್ಲಿ ಯಾವ ಬದಲಾವಣೆ ತರಲಿದ್ದಾರೆ? ಎಂಬುದನ್ನು ಕಾದು ನೋಡಬೇಕಿದೆ ಇತ್ತಿಚೆಗೆ ದೆಹಲಿಯಲ್ಲಿ ನಟಿ ಖುಷ್ಬು ಸಿ.ಟಿ ರವಿ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು.