ಸತೀಶಗೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ, ಸೇಠ್‌ಗೆ ಸಚಿವ ಸ್ಥಾನ ನೀಡಿ
Satish to be made DCM, KPCC President, Seth to be given ministerial berth
ಲೋಕದರ್ಶನ ವರದಿ
ಬೆಳಗಾವಿ 02: ಬೆಳಗಾವಿಯ ಉತ್ತರ ಮತಕ್ಷೇತ್ರದ ಶಾಸಕ ಅಸೀಪ್ (ರಾಜು) ಶೇಠ್ ಅವರಿಗೆ ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು ಹಾಗೂ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಅಧ್ಯಕ್ಷ ಸ್ಥಾನ ನೀಡುವಂತೆ ಕಿತ್ತೂರ ಕರ್ನಾಟಕ ವಿಭಾಗದ ಮುಸ್ಲಿಂ ಸಮಾಜದ ಜಮಾತಗಳ ಒಕ್ಕೂಟ ಒತ್ತಾಯಿಸಿದೆ. ಅಲ್ಲದೆ ಈ ಕುರಿತು ಶೀಘ್ರವಾಗಿ ಬೆಂಗಳೂರಿಗೆ ನಿಯೋಗವನ್ನು ಕರೆದೊಯ್ಯುವ ನಿರ್ಧಾರ ಕೈಗೊಂಡಿರುವದಾಗಿ ಒಕ್ಕೂಟದ ಮುಖಂಡರು ಇಂದಿಲ್ಲಿ ಹೇಳಿದರು.
ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಹಾಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಇರಫಾನ್ ಕುಡಚಿ, ಲೋಂಡಾದ ಸಲೀಮ್ ಪಟೇಲ್, ಖಾನಾಪುರ ತಾಲೂಕಿನ ಇಲಿಯಾಸ್ ಪಟೇಲ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಮಾತನಾಡಿ, ಬೆಳಗಾವಿ ಜಿಲ್ಲೆಯ ಏಕೈಕ ಅಲ್ಪಸಂಖ್ಯಾತ ಶಾಸಕರಾಗಿರುವ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು. ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನದ ಜತೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.
ಈ ಹಿಂದೆ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದ ಐದು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಅದೇ ಮಾದರಿಯನ್ನು ಈಗಿನ ಡಿ.ಕೆ. ಶಿವಕುಮಾರ್ ಸರ್ಕಾರವೂ ಅನುಸರಿಸಬೇಕು. ಅಲ್ಪಸಂಖ್ಯಾತ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಸದ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಚುನಾವಣೆ ಮುಗಿದ ನಂತರ ಸಮುದಾಯವನ್ನು ನಿರ್ಲಕ್ಷಿಸುವ ರಾಜಕಾರಣಕ್ಕೆ ಈ ಬಾರಿ ಆಸ್ಪದ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಬೆಳಗಾವಿ ಉತ್ತರ ಕ್ಷೇತ್ರದ ಈ ಹಿಂದಿನ ಶಾಸಕ ಫಿರೋಜ್ ಸೇಠ್ ಅವರು ಎರಡು ಬಾರಿ ಶಾಸಕರಾದರೂ ಸಚಿವ ಸ್ಥಾನ ನೀಡಲಿಲ್ಲ. ಈ ಬಾರಿಯಾದರೂ ಅವರ ಸಹೋದರ, ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಗೆದ್ದು ಬಂದರೂ ಫಿರೋಜ್ ಸೇಠ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ವಂಚಿತರಾಗಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಿರಿಯ ಮುಖಂಡ ಫಿರೋಜ್ ಸೇಠ್ ಅವರಿಗೆ ಈ ಹಿಂದೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿತ್ತು. ಈ ಬಾರಿಯಾದರೂ ಜಿಲ್ಲೆಯ ಏಕೈಕ ಅಲ್ಪಸಂಖ್ಯಾತ ಶಾಸಕರಾದ ಆಶೀಪ್ ಸೇಠ್ ಅವರಿಗೆ ಹಳೆಯ ತಪ್ಪು ಮರುಕಳಿಸದಂತೆ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಆಶೀಪ್ ಸೇಠ್ ಉತ್ತಮ ಸೇವೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಒಳ್ಳೆಯ ಕಾರ್ಯ ಮಾಡಿದ್ದಾರೆ. ಸೇಠ್ ಅವರು ಬೆಳಗಾವಿಯಲ್ಲಿ ಎಲ್ಲ ಸಮುದಾಯದವರ ಕಷ್ಟಗಳಿಗೆ ಸ್ಪಂದಿಸುವ ಮೂಲಕ ಬೆಳಗಾವಿಗರ ಮನಸ್ಸು ಗೆದ್ದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲು ಇಲ್ಲಿ ನಾವೆಲ್ಲರು ಸೇರಿದ್ದೇವೆ. ಸತೀಶ್ ಜಾರಕಿಹೊಳಿ ಅವರ ಪರವಾಗಿ ಬೆಂಗಳೂರಿಗೆ ನಿಯೋಗ ಒಯ್ಯಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ಸಮುದಾಯವನ್ನು ಕೇವಲ ಮತಬ್ಯಾಂಕ್ ಅಂತಾ ಉಪಯೋಗಿಸುವದು ಬೇಡ. ನಮ್ಮ ಸಮುದಾಯದ ಶಾಸಕ ಸೇಠ್ ಅವರಿಗೆ ಸಚಿವ ಸ್ಥಾನ ನೀಡಿ ನಮಗೆ ನ್ಯಾಯ ಕೊಡಿಸಬೇಕು. ಅಲ್ಲದೆ ಸತೀಶ ಜಾರಕಿಹೊಳಿ ಅವರಿಗೆ ಡಿಸಿಎಂ ಕೆಪಿಸಿಸಿ ಸ್ಥಾನ ನೀಡುವದಾಗಬೇಕು ಎಂದು ಒತ್ತಾಯಿಸಿದರು.
ನಾವು ಅಲ್ಪಸಂಖ್ಯಾತರಾಗಿಯೇ ಹಿಂದೇ ಉಳಿದಿದ್ದೇವೆ. ನಮ್ಮ ಏಳಿಗೆಗಾಗಿ ಸೇಠ್ ಅವರಿಗೆ ಸಚಿವ ಸ್ಥಾನ ನಿಡಬೇಕು. ಈ ಭಾಗದಲ್ಲಿ ಈ ವರೆಗೆ ಮುಸ್ಲಿಂರಿಗೆ ಯಾವದೆ ಹುದ್ದೆ ನೀಡಿಲ್ಲ ಇವಾಗದರು ನೀಡಿ. ಇದು ನಮ್ಮ ಹಕ್ಕು, ಒತ್ತಾಯ ಎಂದರು. ಬೆಳಗಾವಿಗೆ ಇಲ್ಲಿಯ ವರೆಗೆ ಯಾವ ಸಚಿವ ಸ್ಥಾನ ನೀಡಿಲ್ಲ. ಎಲ್ಲರು ಮತ ನೀಡಲು ನಾವು ಬೇಕು ಸಚಿವ ಸ್ಥಾನಕ್ಕೆ ಬೇರೆಯವರು ಬೇಕಾ ಎಂದು ಪ್ರಶ್ನಿಸಿದರು. ಈ ಬಾರಿ ಆಶೀಪ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಸಮುದಾಯ ಮುಂದಿನ ನಿರ್ಧಾರ ಮಾಡುತ್ತದೆ ಎಂದು ಎಚ್ಚರಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 