ಸಾವಳಗಿ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ
ಜಮಖಂಡಿ 28: ಸಾವಳಗಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅರ್ಜುನ ದಳವಾಯಿ, ಗ್ರಾಮೀಣ ಅಧ್ಯಕ್ಷರಾಗಿ ಮಾದೇವಗೌಡ ಪಾಟೀಲ, ನಗರದ ಅಧ್ಯಕ್ಷರಾಗಿ ಮಹೇಶ ಕೋಳಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲಾಯಿತು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ನಗರದ ಎ,ಪಿ,ಎಂ,ಸಿಯಲ್ಲಿ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ನೂತನ ಅಧ್ಯಕ್ಷರ ಆಯ್ಕೆಯ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೇಸ್ ಪಕ್ಷವನ್ನು ಬಲಿಷ್ಟವಾಗಿ ಸಂಘಟನೆ ಮಾಡುವ ಮೂಲಕ. ಕ್ಷೇತ್ರದ ಎಲ್ಲ ಹಿರಿಯ ಮುಖಂಡರ ಸಲಹೆ ಮೇರೆಗೆ ಮೊದಲ ಬಾರಿಯಾಗಿ ಜಮಖಂಡಿ ನಗರದ ಘಟಕ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಸಾವಳಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ಗ್ರಾಮೀಣ ಘಟಕ ಅಧ್ಯಕ್ಷರನ್ನಾಗಿ ಎಲ್ಲರ ಸಮುಖದಲ್ಲಿ ಬಹುಮತದಿಂದ ಆಯ್ಕೆ ಮಾಡಲಾಯಿತು. ಇನ್ನೂ ಗ್ರಾಮೀಣ ಭಾಗದಲ್ಲಿ ಹಾಗೂ ನಗರದಲ್ಲಿ ಕಾಂಗ್ರೇಸ್ ಪಕ್ಷ ಸಂಘಟಿತವಾಗುವ ಉದ್ದೇಶದಿಂದ ಉಳಿದ ಘಟಕದ ಪದಾಧಿಕಾರಿಗಳನ್ನು ಸಹ ಆಯ್ಕೆ ಮಾಡಲಾಗುತ್ತದೆ ಎಂದರು.
ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರ್ಜುನ ದಳವಾಯಿ ಮಾತನಾಡಿ, ಕಾಂಗ್ರೇಸ್ ಪಕ್ಷದ ಹಿರಿಯರು, ಯುವಕರು ನನಗೆ ಬಹುದೊಡ್ಡ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ನಾನು ಕಾಂಗ್ರೇಸ್ ಪಕ್ಷವನ್ನು ಸಂಘಟನೆ ಮಾಡಿ, ಪಕ್ಷಕ್ಕೆ ಕಪ್ಪು ಚುಕ್ಕೆ ಬರದ ಹಾಗೆ ಹಾಗೂ ಮಾಜಿ ಶಾಸಕರಾದ ಆನಂದ ನ್ಯಾಮಗೌಡ ಅವರ ಮಾರ್ಗದರ್ಶನದಲ್ಲಿ ನಡೆದುಕೊಂಡು ಕಾರ್ಯನಿರ್ವಹಿಸುತ್ತೇನೆ ಎಂದರು.
ನಗರ ಘಟಕ ನೂತನ ಅಧ್ಯಕ್ಷ ಮಹೇಶ ಕೋಳಿ ಮಾತನಾಡಿ, ಮೊಟ್ಟಮೊದಲ ಬಾರಿಯಾಗಿ ಕಾಂಗ್ರೇಸ್ ಪಕ್ಷದಿಂದ ನಗರದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು. ಪಕ್ಷವನ್ನು ಸಂಘಟನೆ ಮಾಡುವ ಮೂಲಕ. ಬರುವ ಚುನಾವಣೆಯಲ್ಲಿ ನಗರದಿಂದ ಹತ್ತು ಸಾವಿರ ಅಧಿಕವಾಗಿ ಮತಗಳು ಬರುವ ಹಾಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಮತ್ತೇ ಕಾಂಗ್ರೇಸ್ ಪಕ್ಷದಿಂದ ಮಾಜಿ ಶಾಸಕರಾದ ಆನಂದ ನ್ಯಾಮಗೌಡ ಅವರು ಕಾಂಗ್ರೇಸ್ ಪಕ್ಷದಿಂದ ಚುನಾವಣೆಯಲ್ಲೆ ಗೆದ್ದು. ರಾಜ್ಯದ ಸಚಿವರಾಗುತ್ತಾರೆಂದು ಪಕ್ಷದ ಕಾರ್ಯಕರ್ತರಲ್ಲಿ ನಂಬಿಕೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಹಿರಿಯರು,ಮುಖಂಡರು,ಯುವಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದರು.