ಜಮೀನು ಉಳಿಸಿ ಅಭಿಯಾನಕ್ಕೆ ಚಾಲನೆ
Save the Land campaign launched
ಲೋಕದರ್ಶನ ವರದಿ
ಹುಲಕೋಟಿ 09: ಕೆ,ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ. ಹುಲಕೋಟಿ ಹಾಗೂ ಕೃಷಿ ಇಲಾಖೆ, ಗದಗ ಇವರ ಜಂಟಿ ಆಯೋಜನೆಯಲ್ಲಿ ಜೂನ್ 1 ರಿಂದ 30 ರ ವರೆಗೆ ಗದಗ ಜಿಲ್ಲೆಯಲ್ಲಿ ನಡೆಯಲಿರುವ “ಜಮೀನು ಉಳಿಸಿ ಅಭಿಯಾನ” (ಖೇತ ಬಚಾವೋ ಅಭಿಯಾನ) ಕ್ಕೆ ದಿನಾಂಕ 09-06-2026 ರಂದು ಮಾನ್ಯ ಸಂಸದರಾದ ಬಸವರಾಜ ಬೊಮ್ಮಾಯಿ ಯವರು ಗದಗ ಜಿಲ್ಲಾಧಿಕಾರಿ ಶ್ರೀಧರ್ ಅವರ ಸಮ್ಮುಖದಲ್ಲಿ ಹಸಿರು ಧ್ವಜ ಹಾರಿಸಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ಮಾತನಾಡಿ ಅಭಿಯಾನದ ಉದ್ದೇಶವನ್ನು ತಿಳಿಸಿದರು ಹಾಗೂ ಅಭಿಯಾನದ ರೂಪುರೇಷೆಯನ್ನು ವಿವರಿಸಿದರು.
ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಸುಧಾ ವ್ಹಿ. ಮಂಕಣಿ ಇವರು ಜಿಲ್ಲೆಯಲ್ಲಿ ಮಣ್ಣಿನ ಆರೋಗ್ಯ ಕಾಪಾಡಲು ರೈತ ಬಾಂಧವರಲ್ಲಿ ಅರಿವು ಮೂಡಿಸಲು ಪ್ರತಿದಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಕೃಷಿ ಇಲಾಖೆಯ ಅಧಿಕಾರಿಗಳ ನೆರವಿನೊಂದಿಗೆ ವಿವಿಧ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಈ ಕಾರ್ಯಕ್ರಮಗಳಲ್ಲಿ ಸಮತೋಲನ ಗೊಬ್ಬರಗಳ ಬಳಕೆ, ಜೈವಿಕ ಹಾಗೂ ಸಾವಯವ ಪರಿಕರಗಳ ಮಹತ್ವ ಹಾಗೂ ಜೈವಿಕ ಗೊಬ್ಬರಗಳಿಂದ ಬೀಜೋಪಚಾರದ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ತಿಳಿಸಿದರು. ಮಾನ್ಯ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿಯವರು ಅಭಿಯಾನದ ಯಶಸ್ಸಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು. ಇಂದು ಗದಗ ತಾಲೂಕಿನ ಹೊಂಬಳ ಮತ್ತು ಮಲ್ಲಸಮುದ್ರ ಗ್ರಾಮಗಳಲ್ಲಿ ಖೇತ ಬಚಾವೊ ಅಭಿಯಾನದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 