ಸರ್ಕಾರಿ ವಿದ್ಯುತ್ ಸಂಸ್ಥೆ ಉಳಿಸಿ: ನೌಕರರ ಒತ್ತಾಯ
Save the government power company: Employees demand
ಲೋಕದರ್ಶನ ವರದಿ
ಸವಣೂರ 14 : ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ನೌಕರರು ವಿದ್ಯುತ್ ಇಲಾಖೆಯಲ್ಲಿ ಖಾಸಗಿಕರಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಸಾಂಕೇತಿಕವಾಗಿ ಪ್ರತಿಭಟಿಸಿದರು. ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಟಾಟಾ ಪವರ್ ಕಂಪನಿ ಯವರು ರಾಜ್ಯದಲ್ಲಿ ವಿದ್ಯುತ್ ವಿತರಣೆಯ ಪರವಾನಗೆಗಾಗಿ ಕರ್ನಾಟಕ ವಿದ್ಯುತ್ ಶಕ್ತಿ ಮಂಡಳಿ ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಖಾಸಗಿಯವರಿಗೆ ಮಾರಲು ಹೊರಟಿರುವ ಸರ್ಕಾರದ ಹಿಂಬಾಗಿಲ ಪ್ರಯತ್ನವನ್ನು ಖಂಡಿಸಿದರು. ಹಾವೇರಿಯ ಮತ್ತು ರಾಣೆಬೆನ್ನೂರು ವಿಭಾಗದ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಶಿವಾನಂದ ಹಾದಿಮನಿ ಮಾತನಾಡಿ ನಮ್ಮ ಹಿಂದಿನ ನೌಕರರು ಗುಡ್ಡ ಬೆಟ್ಟಗಳಲ್ಲಿ ವಿದ್ಯುತ್ ಮಾರ್ಗಗಳನ್ನು ಮಾಡಿ, ರಾಜ್ಯದ ಜನರಿಗೆ ಬೆಳಕು ಕೊಡಲು ಅದೆಷ್ಟೋ ಜನ ಪವರ್ಮನ್ ಗಳು ಕತ್ತಲಲ್ಲೇ ಜೀವ ಬಿಟ್ಟಿದ್ದಾರೆ.
ಇಷ್ಟೊಂದು ಜೀವದ ಹಂಗು ತೊರೆದು ಕಟ್ಟಿದ ಸರ್ಕಾರಿ ಸಂಸ್ಥೆಯನ್ನು ಖಾಸಗಿಯವರಿಗೆ ಅಷ್ಟು ಸುಲಭವಾಗಿ ಮಾರಿಬಿಟ್ಟರೆ ಈಗಿರುವ ನೌಕರರ ಉದ್ಯೋಗ ಭದ್ರತೆ ಧಕ್ಕೆ ಉಂಟಾಗುತ್ತದೆ.ಹಾಗಾಗಿ ಇದು ಹೀಗೆ ಮುಂದುವರೆದಲ್ಲಿ ಬಿದಿಗಿಳಿದು ಪ್ರತಿಭಟನೆ ಮಾಡಲಾಗುವುದು ಎಂದರು. ಉಪ-ವಿಭಾಗದ ಸಹಾಯಕ ಕಾರ್ಯನಿವಾಹಕ ಅಭಿಯಂತರರಾದ ದೇವರಾಜ ಅವರೆಡ್ಡಿ ಮಾತನಾಡಿ ನಾವೆಲ್ಲರೂ ಒಗ್ಗಟ್ಟಿನಿಂದ ಸರ್ಕಾರ ಆಕ್ಷೇಪಣೆ ಸಲ್ಲಿಸುವ ಮಟ್ಟಕ್ಕೆ ಹೋರಾಟ ನಡೆಸಬೇಕೆಂದರು.ಈ ಸಂದರ್ಭದಲ್ಲಿ ಉಪ-ವಿಭಾಗದ ಅಧಿಕಾರಿಗಳು, ನೌಕರರ ಸಂಘದ ಎಲ್ಲ ಸಮಿತಿಗಳ ಪದಾಧಿಕಾರಿಗಳು ಹಾಗೂ ನೌಕರರು ಪಾಲ್ಗೊಂಡಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 