ಏ. 12ರಂದು ಸವ್ಯಸಾಚಿ ಗ್ರಂಥ ಬಿಡುಗಡೆ ಸಮಾರಂಭ
Savyasachi Granth release ceremony on April 12
ಅಥಣಿ 10: ಅರವಿಂದರಾವ ದೇಶಪಾಂಡೆ ಅವರ ಸಾಮಾಜಿಕ, ಸಂಘಟನಾ ಹಾಗೂ ಶೈಕ್ಷಣಿಕ ಸೇವೆಯನ್ನು ಮನಗಂಡು ಎಪ್ರಿಲ್ 12 ರಂದು ಜೆ ಎ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಸವ್ಯಸಾಚಿ ಗ್ರಂಥ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆ ಎ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಡಾ ರಾಮ ಕುಲಕರ್ಣಿ ಹೇಳಿದರು.
ಅವರು ಅಥಣಿ ಪಟ್ಟಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಕನೇರಿ ಮಠದ ಶ್ರೀ ಅದೃಶ್ಯಕಾಡಸಿದ್ದೇಶ್ವರ ಮಹಾಸ್ವಾಮಿಗಳು, ಅಯೋಧ್ಯಾ ಶ್ರೀರಾಮಲಲ್ಲಾ ಮೂರ್ತಿಯ ಶಿಲ್ಪಿ ಡಾ ಅರುಣ ಯೋಗಿರಾಜ, ಆರ್ ಎಸ್ ಎಸ್ ಪ್ರಮುಖ ಸುರೇಶ ಜೋಶಿ (ಭಯ್ಯಾಜಿ), ವಿಮೋಚನಾ ಸಂಸ್ಥೆಯ ಅಧ್ಯಕ್ಷ ಬಿ ಎಲ್ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತ ಇರುತ್ತಾರೆ ಎಂದರು.
ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿಯಲ್ಲಿ ಶೈಕ್ಷಣಿಕವಾಗಿ, ಸಂಘಟನಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಸೇವೆ ಸಲ್ಲಿಸಿದ ಅರವಿಂದರಾವ ದೇಶಪಾಂಡೆ ಅವರ ಸೇವೆಗೆ ಪ್ರತ್ಯುತ್ತರವಾಗಿ ಸಮಾನ ಮನಸ್ಕರೆಲ್ಲ ಸೇರಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಎಲ್ಲರೂ ಸೇರಿ ಯಶಸ್ವಿಗೊಳಿಸಲು ಎಲ್ಲರಿಗೂ ಸ್ವಾಗತ ಎಂದರು.
ಸುದ್ದಿಗೋಷ್ಠಿಯಲ್ಲಿ ನ್ಯಾಯವಾದಿ ಬಿ.ಎಲ್.ಪಾಟೀಲ, ಅನೀಲ ದೇಶಪಾಂಡೆ (ಹಿಡಕಲ್), ಸುಹಾಸ ದಾತಾರ ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 