ಯೋಜನೆಗಳು ಮನೆ ಬಾಗಿಲಿಗೆ ತಲುಪಲಿ: ಶಾಸಕ ಗಣೇಶ್
Schemes should reach the doorstep: MLA Ganesh
ಲೋಕದರ್ಶನ ವರದಿ
ಯೋಜನೆಗಳು ಮನೆ ಬಾಗಿಲಿಗೆ ತಲುಪಲಿ: ಶಾಸಕ ಗಣೇಶ್
ಕಂಪ್ಲಿ 12: ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸುವ ಜೊತೆಗೆ, ರಾಜ್ಯದ ಜನತೆಗೆ ನೀಡಿರುವ ಪಂಚ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.
ತಾಲೂಕಿನ ಸುಗುಣೇಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ** ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವು ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.
ಭಾರತ್ ಜೋಡೋ ಯುವ ಸಂಘ ಸ್ಥಾಪಿಸಿ, ರಾಜ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು. ನಡುವಿನ ಸಣ್ಣ ಕಾಲುವೆಗಳಲ್ಲಿ ತುಂಬಿರುವ ಹೂಳು ತೆರವುಗೊಳಿಸುವುದು, ಬಡವರಿಗೆ ನಿವೇಶನ ಸಹಿತ ಮನೆ ಒದಗಿಸುವುದು ಹಾಗೂ ಶ್ರೀರಾಮರಂಗಾಪುರಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಮ್ಮಿಗನೂರು ಭಾಗದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸುಗುಣೇಹಳ್ಳಿಯಲ್ಲಿ ಸಮರ್ಕ ವಿದ್ಯುತ್, ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಇಲ್ಲದಿರುವುದು, ಘನತ್ಯಾಜ್ಯದಿಂದ ದುರ್ವಾಸನೆ ಉಂಟಾಗುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಸೂಚಿಸಿದರು. ಮಳೆ ಆಶ್ರಿತ ರೈತರ ಜಮೀನುಗಳಿಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಂದಾಯ, ಜೆಸ್ಕಾಂ, ತಾಪಂ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ **193ಕ್ಕೂ ಹೆಚ್ಚು ಅರ್ಜಿಗಳು** ಸ್ವೀಕರಿಸಲಾಯಿತು. ಅರ್ಜಿಗಳನ್ನು ಹಂತ ಹಂತವಾಗಿ ವಿಲೇವಾರಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮೀ ಬಾಂಡ್‌ಗಳ ಪಾಸ್‌ಬುಕ್‌ಗಳನ್ನು ಫಲಾನುಭವಿ ತಾಯಂದಿರಿಗೆ ವಿತರಿಸಲಾಯಿತು.
ತಹಶೀಲ್ದಾರ್ ಜೂಗಲ್ ಮಂಜುನಾಥ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್, ತಾಪಂ ಇಒ ಆರ್.ಕೆ. ಶ್ರೀಕುಮಾರ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಲಿಂಗಮೂರ್ತಿ, ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 