ಶಾಲಾ ಬಸ್ ಪಲ್ಟಿ 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ : ಹಲವರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು
ಬೆಳಗಾವಿ : ಶಾಲಾ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಶಾಲಾ ಬಸ್ ಒಂದು ಪಲ್ಟಿ ಹೊಡೆದ ಪರಿಣಾಮ 6 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು, ಇನ್ನು ಹಲವರು ಸಣ್ಣ ಪುಟ್ಟ ಗಾಯಗಳಿಂದ ಬಚಾವಾದ ಘಟನೆ
ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮಟ್ಟಿ ಕ್ರಾಸ್ ಹತ್ತಿರ ಬುಧವಾರ ಬೆಳಿಗ್ಗೆ ನಡೆದಿದೆ.
ಗೋಕಾಕ ತಾಲೂಕಿನ ಮರಡಿಮಠದ ಖಾಸಗಿ ಶಾಲೆಯೊಂದರ ಬಸ್ಸು ಬುಧವಾರ ಬೆಳಿಗ್ಗೆ 9.30 ರ ಸುಮಾರಿಗೆ ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಸುಮಾರು 6 ಜನ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಇನ್ನು ಹಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.