ಶಾಲಾ ಮಕ್ಕಳಿಂದ ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ
School children perform a hoe puja for the new school building
ಯಮಕನಮರಡಿ22 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಯುತ ರಾಹುಲ್ ಅಣ್ಣಾ ಜಾರಕಿಹೊಳಿ ಅವರ ಆದೇಶದ ಮೇರೆಗೆ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕರಗುಪ್ಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕರಗುಪ್ಪಿ ಈ ಶಾಲೆಗೆ ಪಿ ಆರ್ ಇ ಇಲಾಖೆಯಿಂದ ಒಟ್ಟು 85 ಲಕ್ಷ ಮಂಜೂರಾಗಿದ್ದು 5 ಶಾಲಾ ಕೊಠಡಿಗಳ ಅಡಿಗಲ್ಲು ಸಮಾರಂಭ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶೈಕ್ಷಣಿಕ ಆಪ್ತಸಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್ ಶ್ರೀ ಲಗಮಣ್ಣ ಪನಗುದ್ದಿ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಊರಿನ ಹಿರಿಯರು ಹಾಗೂ ಗುತ್ತಿಗೆದಾರರು ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಮುದ್ದು ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಭಾಗವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 