ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನ
School commencement ceremony and school enrollment campaign
ಲೋಕದರ್ಶನ ವರದಿ
ವಿಜಯನಗರ 01: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 88-ಮುದ್ಲಾಪುರ ಹೊಸಪೇಟೆಯಲ್ಲಿ ದಿನಾಂಕ : 01.06.2026 ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಗುಲಾಬಿ ಹೂ ಹಾಗೂ ಸಿಹಿ ಹಂಚುವುದರ ಮೂಲಕ ಮಕ್ಕಳನ್ನ ಶಾಲೆಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ನಂತರ ಪೋಷಕರ-ಶಿಕ್ಷಕರ ಸಭೆ ಆಯೋಜಿಸಿ ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಬಸವರಾಜ.ಕೆ.ರವರು ಮಾತನಾಡಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಪ್ರಸ್ತುತ ಸಾಲಿನಲ್ಲಿ ಕನ್ನಡ ಮಾಧ್ಯಮದೊಂದಿಗೆ ಇಂಗ್ಲಿಷ್ ಮಾಧ್ಯಮವು ಸಹ ಸೇರಿದಂತೆ ದ್ವಿಬಾಷ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಮಕ್ಕಳಿಗೆ ಉಚಿತ ಸಮವಸ್ತ್ರ ಉಚಿತ ಪಠ್ಯಪುಸ್ತಕ, ಶೂ-ಸಾಕ್ಸ್, ಬಿಸಿ ಊಟ, ಕ್ಷೀರಭಾಗ್ಯ, ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಮಕ್ಕಳನ್ನು ತಪ್ಪದೇ ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ತಿಳಿಸಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪರಶುರಾಮ್ ಅವರು ಮಾತನಾಡಿ 88-ಮುದ್ಲಾಪುರ ಶಾಲೆಯಲ್ಲಿ ಉತ್ತಮ ಪ್ರತಿಭಾನ್ವಿತ ಶಿಕ್ಷಕರನ್ನು ಹೊಂದಿದ್ದು, ಸರ್ಕಾರದ ಸೌಲಭ್ಯಗಳನ್ನು ಮಕ್ಕಳಿಗೆ ಸಕಾಲಕ್ಕೆ ನೀಡುವುದರೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದೆ ಸರ್ಕಾರಿ ಶಾಲೆಗೆ ದಾಖಲು ಮಾಡುವುದರ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ತಿಳಿಸಿದರು. ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲೆಯನ್ನು ತಳಿರುತೋರಣ ಹಾಗೂ ರಂಗೋಲಿಗಳಿಂದ ಅಲಂಕರಿಸಿ, ಮಕ್ಕಳನ್ನು ಸ್ವಾಗತಿಸಲಾಯಿತು. ಹಾಗೂ ಶಾಲೆಗೆ ಹಾಜರಾದ ಮಕ್ಕಳಿಗೆ ಸರ್ಕಾರದ ಉಚಿತ ಪಠ್ಯಪುಸ್ತಕವನ್ನ ವಿತರಿಸಲಾಯಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 