ವಿಜ್ಞಾನವು ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ: ರಾಹುಲ್ ಗಾಂಧಿ
ನವದೆಹಲಿ: ಮೇ 06 : ಭಾರತದಲ್ಲಿಯೇ ಹೆಚ್ಚು ಕೋವಿಡ್ -19 ಸಾವುಗಳು ವರದಿಯಾಗಿದೆ ಎಂದು ಹೇಳಿರುವ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ ಒ) ಇತ್ತೀಚಿನ ವರದಿಯ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್-೧೯ ನಿಂದಾಗಿ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಸರ್ಕಾರ ಹೇಳಿಕೊಂಡಂತೆ 4.8 ಲಕ್ಷ ಅಲ್ಲ ಎಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ವಿಜ್ಞಾನವು ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ ಎಂದು ಹೇಳಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ಕಡ್ಡಾಯವಾಗಿ ₹ 4 ಲಕ್ಷ ಪರಿಹಾರ ನೀಡಿ ಎಂದು ಹೇಳಿದ್ದಾರೆ.
ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ, ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶ ಮತ್ತು ಕಾಂಗ್ರೆಸ್‌ನ ಮಗ ಇಬ್ಬರದೂ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್ ನಾಯಕ ಕೋವಿಡ್ ಸಾವಿನ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ ಎಂದು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.
೨೦೨೦, ೨೦೨೧ ಈ ಎರಡು ವರ್ಷಗಳಲ್ಲಿ ಭಾರತದಲ್ಲಿ ಕೋವಿಡ್ ನಿಂದಾಗಿ ೪೭.೪ ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ.