ಬೆಳಗಾವಿಯಲ್ಲಿ ೫೭.೭೮ ಲಕ್ಷ ಮೌಲ್ಯದ ಮಾದಕ ವಸ್ತುಗಳ ವೈಜ್ಞಾನಿಕ ವಿಲೇವಾರಿ
Scientific disposal of narcotics worth Rs. 57.78 lakhs in Belgaum
ಲೋಕದರ್ಶನ ವರದಿ
ಬೆಳಗಾವಿ ೨೬: ಬೆಳಗಾವಿ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಗಳಲ್ಲಿ ಜಪ್ತಿಯಾಗಿದ್ದ ಸುಮಾರು ೫೭.೭೮ ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಗುರುವಾರ ಸರಕಾರದ ನಿಯಮಾನುಸಾರ ಹಾಗೂ ವೈಜ್ಞಾನಿಕ ವಿಧಾನದಲ್ಲಿ ನಾಶಪಡಿಸಲಾಯಿತು.
ಗುರುವಾರ ಬೆಳಿಗ್ಗೆ ೧೧:೩೦ಕ್ಕೆ ನಡೆದ ಈ ಕಾರ್ಯಾಚರಣೆಯಲ್ಲಿ ಒಟ್ಟು ೩೮ ಕೆಜಿ ೧೯೭ ಗ್ರಾಂ ೨೮ ಮಿಲಿಗ್ರಾಂ ತೂಕದ ಮಾದಕ ಮತ್ತು ನಿದ್ರಾಜನಕ ವಸ್ತುಗಳನ್ನು ವಿಲೇವಾರಿ ಮಾಡಲಾಯಿತು. ವಿಲೇವಾರಿ ಮಾಡಲಾದ ವಸ್ತುಗಳಲ್ಲಿ ೨೪ ಕೆಜಿ ೧೩೧ ಗ್ರಾಂ ೪೫ ಮಿಲಿಗ್ರಾಂ ಗಾಂಜಾ (೧೫ ಪ್ರಕರಣಗಳು)–ಅಂದಾಜು ರೂ. ೧೦.೭೬ ಲಕ್ಷ, ೧೨೦ ಗ್ರಾಂ ೮೩ ಮಿಲಿಗ್ರಾಂ ಹೆರಾಯಿನ್ (೮ ಪ್ರಕರಣಗಳು)–ಅಂದಾಜು ರೂ. ೮.೦೨ ಲಕ್ಷ, ಹಾಗೂ ೧೩ ಕೆಜಿ ೯೪೫ ಗ್ರಾಂ ಹಶೀಶ (೧ ಪ್ರಕರಣ)–ಅಂದಾಜು ರೂ. ೩೯ ಲಕ್ಷ ಮೌಲ್ಯದ ಮಾದಕ ವಸ್ತುಗಳು ಸೇರಿವೆ.
ಡ್ರಗ್ಸ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷರು ಹಾಗೂ ಅಪರ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಎಸಿಪಿ (ಅಪರಾಧ ವಿಭಾಗ), ಪಿಐ (ಸಿಸಿರ್ಟಿ), ಪೊಲೀಸ್ ಸಿಬ್ಬಂದಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಉಪ ಔಷಧ ನಿಯಂತ್ರಕರು ಹಾಗೂ ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು.
ಜಪ್ತಿಯಾಗಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದ ಬೆಳಗಾಂ ಗ್ರೀನ್ ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್ ಪ್ರೆöÊವೇಟ್ ಲಿಮಿಟೆಡ್ ಘಟಕದಲ್ಲಿ ಎನ್ಡಿಪಿಎಸ್ ಕಾಯ್ದೆಯ ನಿಯಮಾವಳಿಗಳ ಅನುಸಾರ ವೈಜ್ಞಾನಿಕವಾಗಿ ನಾಶಪಡಿಸಲಾಯಿತು.
ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಾಗಿದ್ದು, ಸಮಾಜವನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಬೆಳಗಾವಿ ನಗರ ಪೊಲೀಸರು ಬದ್ಧರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 